
ಮುಖ 10 ಸುದ್ದಿಗಳು
ಇಸ್ರೇಲ್, ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ ಸೇರಿದಂತೆ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...
ಟೆಹರಾನ್: 1989ರಿಂದ ಇರಾನ್‌ನ ಪರಮೋಚ್ಚ ನಾಯಕನಾಗಿದ್ದ, ಪಾಶ್ಚಿಮಾತ್ಯ ರಾಷ್ಟ್ರಗಳ ಕಟು ವಿರೋಧಿಯಾಗಿದ್ದ ಅಯತೊಲ್ಲಾ ಅಲಿ ಖಮೇನಿ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ.
ಟೆಹರಾನ್: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ತೀವ್ರವಾಗಿ ಖಂಡಿಸಿದ್ದು, ಇದು ‘ಮುಸ್ಲಿಮರ ವಿರುದ್ಧದ ಯುದ್ಧ ಘೋಷಣೆ’ ಎಂದು ಅಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ.
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆ ಖಂಡಿಸಿ ವಿಶ್ವದ ಹಲವೆಡೆ ಆಕ್ರೋಶ ಭುಗಿಲೆದ್ದಿದೆ.
ಮೈಸೂರು: ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಮೈಸೂರಿನ ಪುಷ್ಪಾ ಅಮರನಾಥ್ ದುಬೈನಲ್ಲಿ ಸಿಲುಕಿದ್ದಾರೆ.
ಚಿಕ್ಕಬಳ್ಳಾಪುರ: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿ ಗೌರಿಬಿದನೂರಿನ ಅಲೀಪುದಲ್ಲಿ ಶಿಯಾ ಮುಸ್ಲಿಮರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಹುಬ್ಬಳ್ಳಿ: 'ರಾಜ್ಯದಲ್ಲಿ ವಿರೋಧ ಪಕ್ಷ ಸತ್ತು ಹೋಗಿದ್ದು, ತಾನು ಅಧಿಕಾರಕ್ಕೆ ಬರಲು ಆಡಳಿತ ಪಕ್ಷ ಹಾಳಾಗುವುದನ್ನು ಕಾಯುತ್ತಿದೆ' ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಕೋಲ್ಕತ್ತ: ಇಲ್ಲಿನ ಈಡನ್ ಗಾರ್ಡನ್ಸ್ ಕ್ರಿಕೆಟ್ ಮೈದಾನದಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವೆ ಇಂದು (ಭಾನುವಾರ) ನಿರ್ಣಾಯಕ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡವು ಸೆಮಿಫೈನಲ್ ಪ್ರವೇಶ ಪಡೆಯಲಿದೆ. ಸೋತ ತಂಡ ಟೂರ್ನಿಯಿಂದಲೇ ನಿರ್ಗಮಿಸಲಿದೆ.
ಟೆಹರಾನ್ (ಇರಾನ್): ಇಸ್ರೇಲ್ ಹಾಗೂ ಅಮೆರಿಕದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಖಮೇನಿ ಹತ್ಯೆ ಬೆನ್ನಲ್ಲೇ ಮುಂದಿನ ನಾಯಕ ಯಾರು ಎಂಬ ಪ್ರಶ್ನೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.
ಹೊಬಾರ್ಟ್: ಇಲ್ಲಿನ ಬೆಲ್ಲೆರಿವ್ ಓವಲ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾದ ನಾಯಕಿ ಹಾಗೂ ಆರಂಭಿಕ ಬ್ಯಾಟರ್ ಅಲಿಸಾ ಹೀಲಿ ಅವರು ತಮ್ಮ ಏಕದಿನ ಕ್ರಿಕೆಟ್ ವೃತ್ತಿಜೀವನದ ಕೊನೆಯ ಏಕದಿನ ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.