ADVERTISEMENT

Top 10 News | ಈ ದಿನದ ಪ್ರಮುಖ 10 ಸುದ್ದಿಗಳು: 04 ಅಕ್ಟೋಬರ್‌ 2023

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಅಕ್ಟೋಬರ್ 2023, 13:54 IST
Last Updated 4 ಅಕ್ಟೋಬರ್ 2023, 13:54 IST
   

ಎಎಪಿ ಸಂಸದ ಸಂಜಯ್‌ ಸಿಂಗ್‌ ಬಂಧನ, ಏಷ್ಯನ್‌ ಗೇಮ್ಸ್‌ನ ಜಾವೆಲಿನ್‌ ಸ್ಪರ್ಧೆಯಲ್ಲಿ ನೀರಜ್‌ ಚೋಪ್ರಾಗೆ ಚಿನ್ನ, ನೊಬೆಲ್‌ ಪ್ರಶಸ್ತಿ ಪ್ರಕಟ, ಉಜ್ವಲ ಯೋಜನೆಯಡಿ ಸಬ್ಸಿಡಿ ಹೆಚ್ಚಳ, ಲಾಲೂ ಪ್ರಸಾದ್‌ ಕುಟುಂಬಕ್ಕೆ ಜಾಮೀನು, ರಣಬೀರ್‌ ಕಪೂರ್‌ಗೆ ಇ.ಡಿ ನೋಟಿಸ್‌ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..............

ದೆಹಲಿ ಅಬಕಾರಿ ನೀತಿ ಪ್ರಕರಣ: ಇ.ಡಿಯಿಂದ ಎಎಪಿ ಸಂಸದ ಸಂಜಯ್ ಸಿಂಗ್ ಬಂಧನ

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ಬುಧವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆಯಿಂದ ಅವರ ಮನೆಯಲ್ಲಿ ಇ.ಡಿ ಶೋಧ ಕಾರ್ಯಾಚರಣೆ ನಡೆಸಿತ್ತು.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ADVERTISEMENT

Quantum Dots ಶೋಧ: ಅಮೆರಿಕದ ಮೂವರು ರಸಾಯನ ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ

‘ಕ್ವಾಂಟಮ್‌ ಡಾಟ್ಸ್’ ಎಂದು ಕರೆಯಲಾಗುವ ಅತ್ಯಂತ ಚಿಕ್ಕ ಕಣಗಳ ಕುರಿತು ನಡೆಸಿದ ಸಂಶೋಧನೆಗಾಗಿ ಅಮೆರಿಕದ ಮೂವರು ರಸಾಯನ ವಿಜ್ಞಾನಿಗಳಿಗೆ 2023ರ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದೆ. ಎಂಐಟಿಯ ಮೌಂಗಿ ಬಾವೆಂಡಿ, ಕೊಲಂಬಿಯಾ ವಿಶ್ವವಿದ್ಯಾಲಯದ ಲೂಯಿಸ್ ಬ್ರುಸ್‌ ಹಾಗೂ ನ್ಯಾನೊ ಕ್ರಿಸ್ಟಲ್ ಟೆಕ್ನಾಲಜಿಯ ಅಲೆಕ್ಸಿ ಎಕಿಮೊವ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Asian Games | ಜಾವೆಲಿನ್ ಡಬಲ್ ಧಮಾಕಾ: ನೀರಜ್‌ಗೆ ಚಿನ್ನ, ಕಿಶೋರ್‌ಗೆ ಬೆಳ್ಳಿ

ಏಷ್ಯನ್ ಗೇಮ್ಸ್ 2023ರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನ ಮತ್ತು ಕಿಶೋರ್ ಜೇನಾ ಬೆಳ್ಳಿ ಪದಕ ಜಯಿಸಿದ್ದಾರೆ. ಈ ಮೂಲಕ ಜಾವೆಲಿನ್ ಸ್ಪರ್ಧೆಯಲ್ಲಿ ಭಾರತೀಯ ಸ್ಪರ್ಧಿಗಳು ಅಮೋಘ ಸಾಧನೆ ಮಾಡಿದ್ದಾರೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಉಜ್ವಲ ಯೋಜನೆಯಡಿ ಎಲ್‌ಪಿಜಿ ಸಬ್ಸಿಡಿ ₹300ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (‍ಪಿಎಂಯುವೈ) ಅಡಿ ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ ನೀಡುವ ₹ 200 ಸಬ್ಸಿಡಿಯನ್ನು ₹300ಕ್ಕೆ ಹೆಚ್ಚಳ ಮಾಡಿದೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಬಹಿಷ್ಕಾರಗೊಂಡಿದ್ದ ಮಹಿಳೆ 35 ವರ್ಷದ ಬಳಿಕ ಊರಿಗೆ

ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ಅಗರ ಗ್ರಾಮದಲ್ಲಿ ಸುಮಾರು 35 ವರ್ಷಗಳಿಂದ ಬಹಿಷ್ಕಾರಕ್ಕೆ ಒಳಗಾಗಿದ್ದ ಮಹಿಳೆ ಸಾಕಮ್ಮ ಅವರು ‘ಪ್ರಜಾವಾಣಿ’ ವರದಿ ಫಲಶ್ರುತಿಯಿಂದಾಗಿ ಸ್ವಗ್ರಾಮಕ್ಕೆ ಬಂದಿದ್ದಾರೆ. ಬಹಿಷ್ಕಾರ ಕುರಿತು ಗ್ರಾಮದಲ್ಲಿ ಬುಧವಾರ ನಡೆದ ಶಾಂತಿಸಭೆಯು ಇಂತಹದ್ದೊಂದು ಬೆಳವಣಿಗೆಗೆ ಕಾರಣವಾಯಿತು.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲೂ ಪ್ರಸಾದ್, ರಾಬಡಿ ದೇವಿ, ತೇಜಸ್ವಿಗೆ ಜಾಮೀನು

ರೈಲ್ವೆ ಇಲಾಖೆಯ ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್, ಅವರ ಪತ್ನಿ ರಾಬಡಿ ದೇವಿ ಹಾಗೂ ಪುತ್ರ, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರಿಗೆ ದೆಹಲಿ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಬೆಟ್ಟಿಂಗ್‌ ಆ್ಯಪ್ ಮೂಲಕ ಹಣ ವರ್ಗಾವಣೆ: ನಟ ರಣಬೀರ್‌ ಕಪೂರ್‌ಗೆ ಇಡಿ ನೋಟಿಸ್

ಬೆಟ್ಟಿಂಗ್‌ ಆ್ಯಪ್‌ಗೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣಬೀರ್‌ ಕಪೂರ್‌ಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ಮಹಾದೇವ್‌ ಆನ್‌ಲೈನ್ ಬೆಟ್ಟಿಂಗ್‌ ಆ್ಯಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ ದೇಶದ ಹಲವು ನಗರಗಳಲ್ಲಿ ಶೋಧ ಕಾರ್ಯ ನಡೆಸಿತ್ತು.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಅಮೆರಿಕ: ಕೋವಿಡ್‌ ನೆರವು ಪಡೆದು ವಂಚನೆ– ಇಬ್ಬರು ಭಾರತೀಯರು ದೋಷಿ

ಕೋವಿಡ್‌ ಪಿಡುಗಿನ ನಂತರ ಜಾರಿಯಲ್ಲಿದ್ದ ಆರ್ಥಿಕ ನೆರವು ಯೋಜನೆಯಡಿ ಸಾಲ ಪ‍ಡೆದು ಕೋಟ್ಯಂತರ ರೂಪಾಯಿ ವಂಚಿಸಿ, ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಭಾರತ ಮೂಲದ ಇಬ್ಬರನ್ನು ದೋಷಿಗಳು ಎಂದು ನ್ಯಾಯಾಂಗ ತಿಳಿಸಿದೆ. ಸಾಲ ಪಡೆಯುವುದಕ್ಕಾಗಿ ಸುಳ್ಳು ಅರ್ಜಿಗಳನ್ನು ಸಲ್ಲಿಸಿದ್ದಾಗಿ ಆರೋಪಿಗಳಿಬ್ಬರು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಹೆಚ್ಚಿನ ಓದಿಗಾಗಿ ಕ್ಲಿಕ್‌ ಮಾಡಿ

ಬೆಂಗಳೂರು | ಆರು ಹೆದ್ದಾರಿಗಳಲ್ಲಿ ಎ.ಐ ಕ್ಯಾಮೆರಾ ಕಣ್ಗಾವಲು

ವಾಹನಗಳ ಅತಿಯಾದ ವೇಗ ಹಾಗೂ ಸಂಚಾರ ನಿಯಮ ಉಲ್ಲಂಘನೆ ಮೇಲೆ ಕಣ್ಗಾವಲು ಇಡಲು ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಎ.ಐ (ಕೃತಕ ಬುದ್ಧಿಮತ್ತೆ) ಕ್ಯಾಮೆರಾ ಅಳವಡಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಈ ತಿಂಗಳ ಅಂತ್ಯದ ವೇಳೆಗೆ ಆರು ಹೆದ್ದಾರಿಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಕ್ಕೆ ಬರಲಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಾಗ್ಪುರ: ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ 23 ರೋಗಿಗಳ ಸಾವು

-

ನಾಗ್ಪುರದಲ್ಲಿರುವ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ ಬುಧವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಒಟ್ಟು 23 ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಜಿಎಂಸಿಎಚ್‌) 14 ರೋಗಿಗಳು, ಇಂದಿರಾಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಐಜಿಜಿಎಂಸಿಎಚ್‌) 9 ರೋಗಿಗಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.