ADVERTISEMENT

Top 10 News | ಈ ದಿನದ ಪ್ರಮುಖ 10 ಸುದ್ದಿಗಳು: 13 ಸೆಪ್ಟೆಂಬರ್‌ 2023

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಸೆಪ್ಟೆಂಬರ್ 2023, 14:00 IST
Last Updated 13 ಸೆಪ್ಟೆಂಬರ್ 2023, 14:00 IST
<div class="paragraphs"><p>ರಾಜ್ಯ, ರಾಷ್ಟ್ರೀಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ ಹತ್ತು ಸುದ್ದಿಗಳು..</p></div>

ರಾಜ್ಯ, ರಾಷ್ಟ್ರೀಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ ಹತ್ತು ಸುದ್ದಿಗಳು..

   

ಬೆಂಗಳೂರು: ಆರ್‌ಟಿಒ ಕಚೇರಿಗಳ ಮೇಲೆ ಲೋಕಯುಕ್ತ ಪೊಲೀಸರ ದಾಳಿ, ಉದ್ಯಮಿಯೊಬ್ಬರಿಗೆ ವಂಚನೆ ಆರೋಪ:10 ದಿನ ಸಿಸಿಬಿ ಕಸ್ಟಡಿಗೆ ಚೈತ್ರಾ ಕುಂದಾಪುರ ತಂಡ, ವಿಶೇಷ ಅಧಿವೇಶನದ ಕಾರ್ಯಸೂಚಿ ಏನು ಎಂಬುದನ್ನೇ ತಿಳಿಸದ ಕೇಂದ್ರ: ಟಿಎಂಸಿ ಕಿಡಿ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

ಕಾವೇರಿ ನೀರಿನ ವಿಚಾರದಲ್ಲಿ ಸರ್ಕಾರ ಒತ್ತಡಕ್ಕೆ ಮಣಿಯದಿರಲಿ: ಬಸವರಾಜ ಬೊಮ್ಮಾಯಿ

ADVERTISEMENT

‘ಕಾವೇರಿ ನೀರಿನ ವಿಚಾರದಲ್ಲಿ ನಾವು ರಾಜ್ಯ ಸರ್ಕಾರದ ಜೊತೆಗಿದ್ದೇವೆ. ರಾಜ್ಯ ಸರ್ಕಾರ ರಾಜ್ಯದ ವಾಸ್ತವ ಸ್ಥಿತಿಯನ್ನು ಸುಪ್ರೀಂಕೋರ್ಟ್‌ನಲ್ಲಿ ಗಟ್ಟಿಯಾಗಿ ಪ್ರತಿಪಾದಿಸಬೇಕು’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. 

ಬೆಂಗಳೂರು: ಆರ್‌ಟಿಒ ಕಚೇರಿಗಳ ಮೇಲೆ ಲೋಕಯುಕ್ತ ಪೊಲೀಸರ ದಾಳಿ

ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್‌ಟಿಒ) ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ, ದುರಾಡಳಿತ ನಡೆಯುತ್ತಿರುವ ಕುರಿತು ಪರಿಶೀಲನೆ ನಡೆಸಲು ಇಲ್ಲಿನ ಬಹುತೇಕ ಆರ್‌ಟಿಒ ಕಚೇರಿಗಳ ಮೇಲೆ ಬುಧವಾರ ಮಧ್ಯಾಹ್ನ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು, ಶೋಧ ನಡೆಸುತ್ತಿದ್ದಾರೆ.

ಉದ್ಯಮಿಯೊಬ್ಬರಿಗೆ ವಂಚನೆ ಆರೋಪ:10 ದಿನ ಸಿಸಿಬಿ ಕಸ್ಟಡಿಗೆ ಚೈತ್ರಾ ಕುಂದಾಪುರ ತಂಡ

ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ವಂಚಿಸಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಸೇರಿದಂತೆ ಆರು ಮಂದಿ ಆರೋಪಿಗಳನ್ನು 1ನೇ ಎಸಿಎಂಎಂ ನ್ಯಾಯಾಲಯವು 10 ದಿನ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ.

ವಿಶೇಷ ಅಧಿವೇಶನದ ಕಾರ್ಯಸೂಚಿ ಏನು ಎಂಬುದನ್ನೇ ತಿಳಿಸದ ಕೇಂದ್ರ: ಟಿಎಂಸಿ ಕಿಡಿ

ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಇನ್ನು ಕೇವಲ ಎರಡು ದಿನಗಳು (ರಜಾ ದಿನಗಳನ್ನು ಹೊರತುಪಡಿಸಿ) ಬಾಕಿ ಇವೆ. ಆದರೂ, ಅಧಿವೇಶನದ ಕಾರ್ಯಸೂಚಿ ಏನು ಎಂಬುದನ್ನು ಕೇಂದ್ರ ಸರ್ಕಾರ ತಿಳಿಸಿಲ್ಲ ಎಂದು ತೃಣಮೂಲ ಕಾಂಗ್ರೆಸ್‌  (ಟಿಎಂಸಿ) ಪಕ್ಷ ಟೀಕಿಸಿದೆ.

ಲಂಚ: ತುಮಕೂರಿನ ಉಪ ವಿಭಾಗಾಧಿಕಾರಿಯಾಗಿದ್ದ ತಬಸುಮ್ ಜಹೇರಾಗೆ 4 ವರ್ಷ ಜೈಲು ಶಿಕ್ಷೆ

ಜಮೀನು ವಿವಾದ ಸಂಬಂಧ ಆದೇಶ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಉಪವಿಭಾಗಾಧಿಕಾರಿ ತಬಸುಮ್ ಜಹೇರಾ ಹಾಗೂ ನೌಕರ ಶಬ್ಬೀರ್ ಅಹಮ್ಮದ್‌ಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ತಲಾ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಬುಧವಾರ ಆದೇಶಿಸಿದೆ. ಇಬ್ಬರನ್ನೂ ವಶಕ್ಕೆ ಪಡೆದಿರುವ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಇಮ್ರಾನ್‌ ಖಾನ್‌

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ 26ರವರೆಗೆ ವಿಸ್ತರಿಸಿ ಇಲ್ಲಿನ ವಿಶೇಷ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ.

ಸಿಯುಇಟಿ ಕಡ್ಡಾಯ?: ಪ್ರಮಾಣಪತ್ರ ಸಲ್ಲಿಸಲು ಯುಜಿಸಿಗೆ ದೆಹಲಿ ಹೈಕೋರ್ಟ್‌ ಸೂಚನೆ

ಕೇಂದ್ರೀಯ ವಿಶ್ವವಿದ್ಯಾಲಯಗಳ ಐದು ವರ್ಷಗಳ ಇಂಟಿಗ್ರೇಟೆಡ್ ಕಾನೂನು ಪದವಿ ಕೋರ್ಸ್‌ ಪ್ರವೇಶಕ್ಕೆ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ) ಕಡ್ಡಾಯ ಎಂಬ ಬಗ್ಗೆ  ಪ್ರಮಾಣಪತ್ರ ಸಲ್ಲಿಸುವಂತೆ ದೆಹಲಿ ಹೈಕೋರ್ಟ್‌, ಯುಜಿಸಿಗೆ ಸೂಚಿಸಿದೆ.

ಭಾರತದಲ್ಲಿ 150 ಆನೆ ಕಾರಿಡಾರ್, ಪ.ಬಂಗಾಳದಲ್ಲಿ ಅಧಿಕ: ಪರಿಸರ ಸಚಿವಾಲಯದ ವರದಿ

ದೇಶದಲ್ಲಿ ಕನಿಷ್ಠ 150 ಆನೆ ಕಾರಿಡಾರ್‌ಗಳನ್ನು ಗುರುತಿಸಲಾಗಿದೆ. ಈ ಪೈಕಿ ಗರಿಷ್ಠ 26 ಆನೆ ಕಾರಿಡಾರ್‌ಗಳನ್ನು ಹೊಂದಿರುವ ಪಶ್ಚಿಮ ಬಂಗಾಳ ಅಗ್ರಸ್ಥಾನದಲ್ಲಿದೆ ಎಂದು ಪರಿಸರ ಸಚಿವಾಲಯದ ವರದಿ ಹೇಳುತ್ತದೆ.

ಸಿಎಂ ಸಿದ್ದರಾಮಯ್ಯ ಭಾವಚಿತ್ರದ ಮೇಲೆ ಬರದ ಗೆರೆಗಳನ್ನು ಮೂಡಿಸಿದ ಕರ್ನಾಟಕ ಬಿಜೆಪಿ

ರಾಜ್ಯದಲ್ಲಿ ಹಲವು ಕಡೆ ಮಳೆ ಕೊರತೆಯಿಂದ ಬರದ ಮುನ್ಸೂಚನೆ ಈಗಾಗಲೇ ಸಿಕ್ಕಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಈ ಬಗ್ಗೆ ಇತ್ತೀಚೆಗೆ ಸಭೆ ನಡೆಸಿ 100 ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸಿ ಘೋಷಣೆ ಮಾಡಲು ತಯಾರಿ ಮಾಡಿಕೊಂಡಿದ್ದಾರೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಠಾಣೆಗೆ ಹಾಜರಾಗಲು ರಾಮ್‌ದೇವ್‌ಗೆ HC ನಿರ್ದೇಶನ

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾರ್ಮರ್ ಚೋಟಾನ್‌ ಪೊಲೀಸ್‌ ಠಾಣೆಯಲ್ಲಿ ಅ. 5ರಂದು ಹಾಜರಾಗುವಂತೆ ಯೋಗ ಗುರು ಬಾಬಾ ರಾಮದೇವ್‌ಗೆ ರಾಜಸ್ಥಾನ ಹೈಕೋರ್ಟ್ ನಿರ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.