ADVERTISEMENT

ದಿನದ ಪ್ರಮುಖ 10 ಸುದ್ದಿಗಳು: 26 ಜನವರಿ 2026

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜನವರಿ 2026, 14:07 IST
Last Updated 26 ಜನವರಿ 2026, 14:07 IST
   

ದೇಶದಾದ್ಯಂತ ಗಣರಾಜ್ಯೋತ್ಸವ ಆಚರಣೆ, ಪೌರಾಯುಕ್ತೆಗೆ ನಿಂದಿಸಿದ ರಾಜೀವ್ ಗೌಡ ಬಂಧನ ಸೇರಿದಂತೆ ಈ ದಿನದ ಪ್ರಮುಖ ಸುದ್ದಿಗಳು ಇಲ್ಲಿವೆ

ಕರ್ತವ್ಯಪಥದ ಮೇಲೆ ಹೂ ಮಳೆ, ಸೇನಾ ಶಕ್ತಿಯ ಅನಾವರಣ

<div class="paragraphs"><p>ಕೃಪೆ: ಪಿಟಿಐ</p></div>

ವಾಯು ಸೇನಾ ಸಿಬ್ಬಂದಿ ಪಥಸಂಚಲನ

ದೇಶದಾದ್ಯಂತ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಎಲ್ಲೆಡೆ ಬಿಗಿ ಭದ್ರತೆ ವಹಿಸಲಾಗಿದೆ. ರಾಷ್ಟ್ರರಾಜಧಾನಿಯ ಕರ್ತವ್ಯ ಪಥದಲ್ಲಿ ನಡೆಯುತ್ತಿರುವ ಸ್ಥಭ್ತಚಿತ್ರಗಳ ಮೆರವಣಿಗೆಯು ಸಾಂಸ್ಕೃತಿಕ ವೈವಿಧ್ಯತೆಯನ್ನು ಅನಾವರಣಗೊಳಿಸಿತು.

ADVERTISEMENT

ಬೆಂಗಳೂರಿನಲ್ಲಿ ರಾಜ್ಯಪಾಲ ಗೆಹಲೋತ್‌ರಿಂದ ಧ್ವಜಾರೋಹಣ

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥೇವರ್ ಚಂದ್ ಗೆಹಲೋತ್ ಅವರು ಧ್ವಜಾರೋಹಣ ನೆರವೇರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸಂಪೂರ್ಣ ಭಾಷಣ ಓದಿದ ರಾಜ್ಯಪಾಲರು

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಓದುತ್ತಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್

ಬೆಂಗಳೂರು: ನಗರದಲ್ಲಿ ಸೋಮವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸಂಪೂರ್ಣ ಭಾಷಣ ಓದಿದರು.

ಕಳೆದ ವಾರ ವಿಧಾನಮಂಡಲ ಅಧಿವೇಶನದ ವೇಳೆ ಮೊದಲ ಹಾಗೂ ಕೊನೆಯ ಸಾಲು ಓದಿ ನಿರ್ಗಮಿಸಿದ್ದರು. ಇದರಿಂದ ವಿವಾದ ಸೃಷ್ಟಿಯಾಗಿತ್ತು.

ಪೌರಾಯುಕ್ತೆಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ರಾಜೀವ್ ಗೌಡ ಬಂಧನ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದಿಂದ ಗೋವಾಕ್ಕೆ ತೆರಳುವಾಗ ಚಿಕ್ಕಬಳ್ಳಾಪುರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

‘ಬಂಧನ ಖಚಿತ. ಆದರೆ ಸದ್ಯ ಯಾವುದೇ ಮಾಹಿತಿ ನೀಡುವುದಿಲ್ಲ. ನಾಳೆ ಸಮಗ್ರವಾಗಿ ವಿವರ ನೀಡಲಾಗುವುದು’ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ‘ಪ್ರಜಾವಾಣಿ’ಗೆ ತಿಳಿಸಿದರು.

ಬೆಂಗಳೂರು | ರೈಲಿಗೆ ತಾಗಿದ ಬಿಎಂಟಿಸಿ ಬಸ್‌: ತಪ್ಪಿದ ದುರಂತ

ಬೆಂಗಳೂರು: ಸಾದರಮಂಗಲದಲ್ಲಿ ನಿರ್ಲಕ್ಷ್ಯದಿಂದ ಹಿಂದಕ್ಕೆ ಚಲಾಯಿಸಿದ ಬಿಎಂಟಿಸಿ ಬಸ್‌ಗೆ ರೈಲು ತಾಗಿದ್ದು, ಬಸ್‌ನ ಹಿಂಭಾಗಕ್ಕೆ ಹಾನಿಯಾಗಿದೆ. ಬಸ್‌ನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ದುರಂತ ತಪ್ಪಿದೆ.

'ನರೇಗಾ ಉಳಿಸಿ' ಆಗ್ರಹಿಸಿ ಲೋಕಭವನ ಚಲೋ: ಡಿ.ಕೆ. ಶಿವಕುಮಾರ್

ಡಿ.ಕೆ. ಶಿವಕುಮಾರ್

ಬೆಂಗಳೂರು: 'ನರೇಗಾ ಉಳಿಸುವ ಸಲುವಾಗಿ ಮಂಗಳವಾರ ( ಜ.27) ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯಿತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು' ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಗಗನಯಾನಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ

 ಗಗನಯಾನಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 77ನೇ ಗಣರಾಜ್ಯೋತ್ಸವದಂದು (ಸೋಮವಾರ) ಗಗನಯಾನಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ 'ಅಶೋಕ ಚಕ್ರ'ವನ್ನು ಪ್ರದಾನ ಮಾಡಿದರು.

ಮಾಜಿ ರಾಜ್ಯಪಾಲ ಕೋಶಿಯಾರಿ ಪದ್ಮಭೂಷಣ: ಮಹಾರಾಷ್ಟ್ರ ವಿರೋಧ ಪಕ್ಷಗಳ ಕಿಡಿ

ಭಗಂತ್‌ ಸಿಂಗ್‌ ಕೋಶಿಯಾರಿ 

ಮುಂಬೈ: ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಪದ್ಮ ಭೂಷಣ ಪುರಸ್ಕಾರ ಘೋಷಣೆ ಮಾಡಿದ ಕೇಂದ್ರ ಸರ್ಕಾರದ ನಡೆಯು ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿದೆ.

‘ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಕಗ್ಗೊಲೆ ಮಾಡಿದವರಿಗೆ ಪುರಸ್ಕಾರ ಘೋಷಣೆ ಮಾಡಲಾಗಿದೆ ಎಂದು’ ಶಿವಸೇನಾ (ಯುಟಿಬಿ) ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.

ಭಾರತ–ಚೀನಾ ಒಳ್ಳೆಯ ಗೆಳೆಯರು; ನಾವು ಉತ್ತಮ ನೆರೆಹೊರೆಯ ದೇಶಗಳು: ಷಿ ಜಿನ್‌ಪಿಂಗ್ ಬೀಜಿಂಗ್

ಬೀಜಿಂಗ್: ಭಾರತ ಮತ್ತು ನಾವು ಒಳ್ಳೆಯ ಗೆಳೆಯರಾಗಿದ್ದು, ಉತ್ತಮ ನೆರೆಹೊರೆಯ ರಾಷ್ಟ್ರಗಳಾಗಿವೆ. ಎರಡೂ ದೇಶಗಳು ಒಟ್ಟಾಗಿ ಸಾಗುವುದರಿಂದ ಉಭಯ ದೇಶಗಳಿಗೂ ಅನುಕೂಲವಾಗಲಿದೆ ಎಂದು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಸೋಮವಾರ ಹೇಳಿದ್ದಾರೆ.

IND vs NZ: ಸರಣಿಯಿಂದ ಹೊರಬಿದ್ದ ತಿಲಕ್ ವರ್ಮಾ; ಶ್ರೇಯಸ್ ಅಯ್ಯರ್‌ಗೆ ಅವಕಾಶ

ನವದೆಹಲಿ: ಭಾರತ ಮತ್ತು ನ್ಯೂಜಿಲೆಂಡ್‌ ನಡುವಿನ ಟಿ–20 ಸರಣಿಯಿಂದ ಬ್ಯಾಟರ್‌ ತಿಲಕ್ ವರ್ಮಾ ಹೊರಬಿದ್ದಿದ್ದಾರೆ. ಅವರ ಬದಲಿಗೆ ಶ್ರೇಯಸ್ ಅಯ್ಯರ್‌ಗೆ ಅವಕಾಶ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.