ADVERTISEMENT

30 ಜನವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಜನವರಿ 2026, 14:43 IST
Last Updated 30 ಜನವರಿ 2026, 14:43 IST
   

ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಐಟಿ ಅಧಿಕಾರಿಗಳ ಪರಿಶೀಲನೆ ಮಧ್ಯೆಯೇ ಕಾನ್ಫಿಡೆಂಟ್‌ ಗ್ರೂಪ್ CEO ರಾಯ್‌ ಆತ್ಮಹತ್ಯೆ

ಬೆಂಗಳೂರು: ಇಲ್ಲಿನ ಲ್ಯಾಂಗ್​ಫೋರ್ಡ್ ರಸ್ತೆಯಲ್ಲಿ ಇರುವ ಫ್ಲ್ಯಾಟ್‌ನಲ್ಲಿ ಕಾನ್ಫಿಡೆಂಟ್ ಗ್ರೂಪ್ ಸಿಇಒ ಸಿ.ಜೆ.ರಾಯ್ ಅವರು ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ADVERTISEMENT

ಶಬರಿಮಲೆ ಚಿನ್ನ ಕಳವು: ಎಸ್‌ಐಟಿಯಿಂದ ನಟ ಜಯರಾಮ್ ವಿಚಾರಣೆ

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನಗಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಖ್ಯಾತ ನಟ ಜಯರಾಮ್ ಅವರನ್ನು ವಿಚಾರಣೆಗೆ ಒಳಪಡಿಸಿವೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಜಿಯೊದಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಎ.ಐ. ತರಬೇತಿ

ಕೃತಕ ಬುದ್ಧಿಮತ್ತೆ (ಎ.ಐ) ಬಳಕೆಯು ಹೆಚ್ಚಿನವರಿಗೆ ಸಾಧ್ಯವಾಗಬೇಕು ಎಂಬ ಉದ್ದೇಶದಿಂದ ರಾಜ್ಯದಾದ್ಯಂತ ‘ಸಮಗ್ರ ಎ.ಐ. ಶಿಕ್ಷಣ ಅಭಿಯಾನ’ ಆರಂಭಿಸಿರುವುದಾಗಿ ರಿಲಯನ್ಸ್‌ ಜಿಯೊ ಹೇಳಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

40ದಿನಗಳಲ್ಲಿ ಗೋಮಾಂಸ ರಫ್ತು ನಿಲ್ಲಿಸಲು ಸಿಎಂ ಯೋಗಿಗೆ ಅವಿಮುಕ್ತೇಶ್ವರಾನಂದ ಸವಾಲು

ವಾರಾಣಸಿ: ‘ರಾಜ್ಯದಿಂದ ಗೋಮಾಂಸ ರಫ್ತು ನಿಲ್ಲಿಸಿ ಮತ್ತು ಗೋವನ್ನು ‘ರಾಷ್ಟ್ರ ಮಾತಾ’ ಎಂದು ಘೋಷಿಸಿ. ಈ ಮೂಲಕ ಹಿಂದೂ ಧರ್ಮದ ಕುರಿತ ತಮ್ಮ ಬದ್ಧತೆಯನ್ನು ಸಾಬೀತು ಮಾಡಿ’ ಎಂದು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಸವಾಲೆಸೆದಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಕೋಮುವಾದ ವಿರುದ್ಧ ರಾಹುಲ್ ಗಾಂಧಿ 'ಪ್ರಬಲ ಧ್ವನಿ': ಶಶಿ ತರೂರ್‌ ಶ್ಲಾಘನೆ

ತಿರುವನಂತಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪ್ರಾಮಾಣಿಕ ವ್ಯಕ್ತಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಶುಕ್ರವಾರ ಶ್ಲಾಘಿಸಿದ್ದಾರೆ. ಅಲ್ಲದೇ ಅವರು ದೇಶದಲ್ಲಿ ಕೋಮುವಾದದಂತಹ ವಿವಿಧ ವಿಷಯಗಳ ವಿರುದ್ಧ 'ಪ್ರಬಲ ಧ್ವನಿ'ಯಾಗಿದ್ದಾರೆ ಎಂದಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎಂಬಂತೆ ಬಿಜಿಪಿ ಸಂಸದರ ವರ್ತನೆ: ಡಿಕೆಶಿ ವ್ಯಂಗ್ಯ

ಶಿವಮೊಗ್ಗ: 'ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತುತ್ತಿಲ್ಲ. ಅವರೆಲ್ಲ ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಕುಟುಕಿದರು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಜಾಮೀನು 

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಮೊಬೈಲ್ ಕರೆ ಮಾಡಿ ಧಮ್ಕಿ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ಜಾಮೀನು ಮಂಜೂರಾಗಿದೆ

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಡಿಸೆಂಬರ್‌ ಅಂತ್ಯದ ವೇಳೆಗೆ ಕೇಂದ್ರ ಸರ್ಕಾರದ ವಿತ್ತೀಯ ಕೊರತೆ ಶೇ 54.5

ನವದೆಹಲಿ: ಡಿಸೆಂಬರ್‌ ಅಂತ್ಯದ ವೇಳೆಗೆ ಕೇಂದ್ರ ಸರ್ಕಾರದ ವಿತ್ತೀಯ ಕೊರತೆಯು 2025–26ನೇ ಬಜೆಟ್‌ನಲ್ಲಿ ಅಂದಾಜು ಮಾಡಿರುವ ಮೊತ್ತದ ಶೇಕಡ 54.5ರಷ್ಟು ಆಗಿದೆ. ಮೊತ್ತದ ಲೆಕ್ಕದಲ್ಲಿ ಇದು ₹8.55 ಲಕ್ಷ ಕೋಟಿ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆರು ವಲಯಗಳಿಗೆ ಚೇರ್ಮನ್‌ ನೇಮಕ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆರು ವಲಯಗಳಿಗೆ ಶುಕ್ರವಾರ ಚೇರ್ಮನ್‌ಗಳನ್ನು ನೇಮಕ ಮಾಡಲಾಗಿದೆ. 

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.