
ಈ ದಿನದ ಪ್ರಮುಖ 10 ಸುದ್ದಿಗಳು
ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿಷಯಗಳಿಗೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ....
ಹಾವೇರಿ: ‘ಪದೇ ಪದೇ ಕೇಳಬೇಡಿ. ಹೈಕಮಾಂಡ್ ಹೇಳಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನವದೆಹಲಿ: ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಹಾಗೂ ನಾಲ್ಕನೇ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮಾರ್ಗಗಳ ನಿರ್ಮಾಣಕ್ಕೆ ₹2,372 ಕೋಟಿ ವೆಚ್ಚವಾಗಲಿದೆ.
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧದ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ವಿರೋಧ ಪಕ್ಷಗಳು ಮುಂದಾಗಿವೆ.
ನವದೆಹಲಿ: ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿ ಮೂಲಕ ಹಾಯ್ದುಹೋಗುವ ದೇಶದ ಮೊದಲ ರಸ್ತೆ ಮತ್ತು ರೈಲು ಮಾರ್ಗ ಒಳಗೊಂಡ ‘ಟ್ವಿನ್ ಟ್ಯೂಬ್ ಸುರಂಗ’ ನಿರ್ಮಾಣಕ್ಕೆ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಶನಿವಾರ ಅನುಮೋದನೆ ನೀಡಿದೆ.
ಹನೂರು (ಚಾಮರಾಜನಗರ ಜಿಲ್ಲೆ): ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ವೃದ್ಧೆಯನ್ನು ಸಕಾಲದಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ದೊರೆಯದ ಕಾರಣ, ಸಂಬಂಧಿಕರು ಡೋಲಿ ಕಟ್ಟಿಕೊಂಡು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ ಘಟನೆ ಮಹದೇಶ್ವರ ಬೆಟ್ಟದಲ್ಲಿ ಶನಿವಾರ ನಡೆದಿದೆ.
ಹಾವೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ದಲ್ಲಿ ಪಾಲ್ಗೊಂಡಿದ್ದ ಜನರು
ಹಾವೇರಿ: ‘ಇಡೀ ದೇಶದ ಜಿಡಿಪಿಯಲ್ಲಿ (ಒಟ್ಟು ದೇಶೀಯ ಉತ್ಪನ್ನ) ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಸಂಗ್ರಹದಲ್ಲೂ ಮುಂದಿದೆ. ಆದರೆ, ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಬಿಜೆಪಿ ಸಂಸದರು, ಇದರ ಬಗ್ಗೆ ಬಾಯಿ ಬಿಡುತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ರಾಮನಗರ: ನಗರದ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಶನಿವಾರ ದ್ವಿತಳಿ ಗೂಡಿನ ದರ ಪ್ರತಿ ಕೆ.ಜಿ.ಗೆ ಗರಿಷ್ಠ ₹1 ಸಾವಿರಕ್ಕೆ ಮಾರಾಟವಾಗುವ ಮೂಲಕ ಹೊಸ ದಾಖಲೆ ಬರೆಯಿತು. ಮಿಶ್ರತಳಿ ಗೂಡಿಗೂ ಬಂಪರ್ ಬೆಲೆ ಬಂದಿದ್ದು ಪ್ರತಿ ಕೆ.ಜಿ.ಗೆ ₹800ಕ್ಕೆ ಬಿಕರಿಯಾಯಿತು!
ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆಯಾಗಿದೆ ಎಂದು ಭಾರತದ ಕಾನ್ಸುಲೇಟ್ ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ/ಢಾಕಾ: ಬಾಂಗ್ಲಾದೇಶದ ಮುಂದಿನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಲಾಗಿದೆ.
ಕೊಲಂಬೊ: ಮಹಾಶಿವರಾತ್ರಿಯ ದಿನವಾದ ಭಾನುವಾರ ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಉಭಯ ದೇಶಗಳ ನಡುವಣ ರಾಜತಾಂತ್ರಿಕ ಬಿಕ್ಕಟ್ಟಿನ ಕಾರಣಕ್ಕಾಗಿ ಈ ಪಂದ್ಯವು ಅಪಾರ ಕುತೂಹಲ ಕೆರಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.