ADVERTISEMENT

ಅಂಡಮಾನ್‌ನತ್ತ ಚಂಡಮಾರುತ: ಸನ್ನದ್ಧ ಸ್ಥಿತಿಯಲ್ಲಿ ಪಡೆಗಳು

ಪಿಟಿಐ
Published 17 ಮಾರ್ಚ್ 2022, 22:04 IST
Last Updated 17 ಮಾರ್ಚ್ 2022, 22:04 IST

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್‌ ದ್ವೀಪಕ್ಕೆ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ, ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ನೌಕಾಯಾನ ಚಟುವಟಿಕೆಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರ ಗುರುವಾರ ಆದೇಶಿಸಿದೆ.

ಮಾರ್ಚ್ 21ರಂದು ಚಂಡಮಾರುತ ದ್ವೀಪದ ನೆಲಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ತುರ್ತು ಹಾಗೂ ರಕ್ಷಣಾ ಕಾರ್ಯಗಳ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್‌ ಭಲ್ಲಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ರಕ್ಷಣಾ ಕಾರ್ಯಕ್ಕಾಗಿ ಸೇನೆ, ವಾಯುಪಡೆ ಹಾಗೂ ನೌಕಾಪಡೆಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ಎನ್‌ಡಿಆರ್‌ಎಫ್‌ನ ಒಂದು ತುಕಡಿ ಈಗಾಗಲೇ ಪೋರ್ಟ್‌ಬ್ಲೇರ್‌ನಲ್ಲಿ ಠಿಕಾಣಿ ಹೂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.