ಸಹಾಯವಾಣಿ
ಶ್ರೀನಗರ: ಕಾಶ್ಮೀರದ ದಕ್ಷಿಣ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಇಂದು (ಏ. 22) ನಡೆದ ಭಯೋತ್ಫಾದಕ ದಾಳಿಯ ನಂತರ ರಾಜ್ಯದಲ್ಲಿರುವ ಪ್ರವಾಸಿಗರ ನೆರವಿಗಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಸಹಾಯವಾಣಿ ಆರಂಭಿಸಿದೆ.
ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
ಪ್ರವಾಸಿಗರಿಗೆ ಅಗತ್ಯ ನೆರವು ಮತ್ತು ಮಾಹಿತಿಗಾಗಿ ದಿನದ 24 ಗಂಟೆಗಳ ಕಾಲ ಈ ಕೇಂದ್ರ ಕರ್ತವ್ಯ ನಿರ್ವಹಿಸಲಿದ್ದು, ಮೊಬೈಲ್ ಸಂಖ್ಯೆ 01932222337, 7780885759, 9697982527 ಅಥವಾ 6006365245 ಸಂಪರ್ಕಿಸಬಹುದು ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ಶ್ರೀನಗರದಲ್ಲಿ ತುರ್ತು ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಯಾವುದೇ ನೆರವಿಗಾಗಿ ಪ್ರವಾಸಿಗರು 01942457543, 01942483651 ಅಥವಾ 7006058623 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.
2019ರ ಪುಲ್ವಾಮ ದಾಳಿಯ ನಂತರ ಕಣಿವೆ ರಾಜ್ಯದಲ್ಲಿ ನಡೆದ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.
ಮೃತಪಟ್ಟ 26 ಮಂದಿಯಲ್ಲಿ ಇಬ್ಬರು ವಿದೇಶಿಯರು ಮತ್ತು ಇಬ್ಬರು ಸ್ಥಳೀಯರು ಸೇರಿದ್ದಾರೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.