ನಾಸಿಕ್ : ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಜನರು ಪೂಜೆಗೆಂದು ತೆರಳುತ್ತಿದ್ದ ಟ್ರ್ಯಾಕ್ಟರ್ ಕಂದಕಕ್ಕೆ ಉರುಳಿ ಇಬ್ಬರು ಮೃತಪಟ್ಟಿದ್ದಾರೆ. 14 ಮಂದಿ ತೀವ್ರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.
ನಂದಗಾಂವ್ ತಾಲೂಕಿನ ಜತೇಗಾಂವ್ ಬಳಿಯ ಚಂದನಪುರಿ ಶಿವಾರ್‌ನಲ್ಲಿರುವ ಪಿನಾಕೇಶ್ವರ ಮಹಾದೇವ ದೇವಸ್ಥಾನದಲ್ಲಿ ಪೂಜೆಗೆಂದು ತೆರಳಿದ್ದರು. ಭಾನುವಾರ ಸಂಜೆ ಛತ್ರಪತಿ ಸಂಭಾಜಿನಗರಕ್ಕೆ ಮರಳುವಾಗ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಅಫಘಾತದಲ್ಲಿ ಛತ್ರಪತಿ ಸಂಭಾಜಿನಗರದ ಕಾಂತಾಬಾಯಿ ನಾರಾಯಣ್ ಗಾಯ್ಕೆ (56) ಹಾಗೂ ಕಮಲಾಬಾಯಿ ಶ್ಯಾಮರಾವ್ ಜಗದಾಳೆ (60) ಇಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡ 14 ಮಂದಿಯನ್ನು ಛತ್ರಪತಿ ಸಂಭಾಜಿನಗರದ ಘಾಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದಾಗ ಟ್ರ್ಯಾಕ್ಟರ್‌ನಲ್ಲಿ ಬ್ರೇಕ್ ಫೇಲ್ ಆಗಿರುವುದು ಬೆಳಕಿಗೆ ಬಂದಿದೆ. ಬ್ರೇಕ್ ಫೇಲ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಟ್ರ್ಯಾಕ್ಟರ್ ಉರುಳಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.