
ನವದೆಹಲಿ: ದೇಶದಾದ್ಯಂತ ಮತ್ತು ವಿದೇಶಗಳಲ್ಲಿ ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲು ಭಾರತವು ವಿವಿಧ ರಾಷ್ಟ್ರಗಳೊಂದಿಗೆ ವ್ಯಾಪಾರ ಮತ್ತು ಚಲನಶೀಲತೆ ಒಪ್ಪಂದಗಳನ್ನು ಮಾಡಿಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
18ನೇ ರೋಜ್‌ಗಾರ್ ಮೇಳದಲ್ಲಿ ವಿವಿಧ ಸರ್ಕಾರಿ ಉದ್ಯೋಗಗಳಿಗೆ 61,000 ನೇಮಕಾತಿ ಪತ್ರಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಹಸ್ತಾಂತರಿಸುವ ಮೂಲಕ ಮೋದಿ ಈ ಹೇಳಿಕೆ ನೀಡಿದರು.
‘ಭಾರತವು ಹಲವಾರು ದೇಶಗಳೊಂದಿಗೆ ವ್ಯಾಪಾರ ಮತ್ತು ಚಲನಶೀಲತೆ ಒಪ್ಪಂದಗಳಿಗೆ ಸಹಿ ಹಾಕುತ್ತಿದೆ. ಈ ವ್ಯಾಪಾರ ಒಪ್ಪಂದಗಳು ದೇಶದ ಯುವಕರಿಗೆ ಹೊಸ ಅವಕಾಶಗಳನ್ನು ತರುತ್ತಿವೆ’ಎಂದು ವಿಡಿಯೊ ಕಾನ್ಫರೆನ್ಸ್ ಮೂಲಕ ದೇಶದಾದ್ಯಂತ 45 ಸ್ಥಳಗಳಲ್ಲಿ ನಡೆದ ರೋಜ್‌ಗಾರ್ ಮೇಳವನ್ನುದ್ದೇಶಿಸಿ ಮೋದಿ ಹೇಳಿದರು.
ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಯುವಕರನ್ನು ಹೊಂದಿದೆ. ಅವರಿಗಾಗಿ ಸರ್ಕಾರವು ದೇಶ ಮತ್ತು ವಿದೇಶಗಳಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಮೋದಿ ಹೇಳಿದರು.
ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನ ಮಂತ್ರಿಯವರ ಬದ್ಧತೆಯನ್ನು ಕಾರ್ಯರೂಪಕ್ಕೆ ತರುವ ಗುರಿಯನ್ನು ಹೊಂದಿರುವ ಪ್ರಮುಖ ಉಪಕ್ರಮ ರೋಜ್‌ಗಾರ್ ಮೇಳ ಎಂದು ಪಿಎಂಒ ಹೇಳಿಕೆ ತಿಳಿಸಿದೆ.
ರೋಜ್‌ಗಾರ್ ಯೋಜನೆ ಆರಂಭವಾದಾಗಿನಿಂದ ದೇಶದಾದ್ಯಂತ 11 ಲಕ್ಷ ಜನರಿಗೆ ನೇಮಕಾತಿ ಪತ್ರ ನೀಡಲಾಗಿದೆ.
ಇಂದು 18ನೇ ರೋಜ್‌ಗಾರ್ ಮೇಳವನ್ನು ದೇಶದ 45 ಸ್ಥಳಗಲಲ್ಲಿ ಆಯೋಜಿಸಲಾಗಿತ್ತು. ದೇಶದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಯಿತು.
ಈ ಪೈಕಿ ಕೇಂದ್ರದ ಗೃಹ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಣಕಾಸಯ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಗೆ ನೇಮಕಾತಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.