ADVERTISEMENT

ನ್ಯಾಷನಲ್ ಹೆರಾಲ್ಡ್‌ ಪ್ರಕರಣ: ಇ.ಡಿ ಯಿಂದ ಸೋನಿಯಾ ವಿಚಾರಣೆ ಸಾಧ್ಯತೆ

ಕಾಂಗ್ರೆಸ್‌ನಿಂದ ಪ್ರತಿಭಟನೆ: ದೆಹಲಿಯಲ್ಲಿ ವ್ಯಾಪಕ ಭದ್ರತೆ

ಪಿಟಿಐ
Published 20 ಜುಲೈ 2022, 19:57 IST
Last Updated 20 ಜುಲೈ 2022, 19:57 IST
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ   

ನವದೆಹಲಿ: ನ್ಯಾಷನಲ್ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಗುರುವಾರ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಇನ್ನೊಂದೆಡೆ, ಸೋನಿಯಾ ಗಾಂಧಿ ಅವರನ್ನು ಇ.ಡಿ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ಖಂಡಿಸಿ ನವದೆಹಲಿಯಲ್ಲಿ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇದೆ.

‘ಒಂದೆಡೆ ಸಂಸತ್‌ನ ಅಧಿವೇಶನ ನಡೆಯುತ್ತಿದೆ. ವಿವಿಧೆಡೆ ಕಾಂಗ್ರೆಸ್‌ ಪಕ್ಷವು ಪ್ರತಿಭಟನೆ ನಡೆಸಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗಲಿದ್ದು, ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗಿದೆ. ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

‘ಕಾಂಗ್ರೆಸ್‌ ಕಚೇರಿ ಬಳಿಯ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ’ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.