
ಪಿಟಿಐ
ಎಐ ಚಿತ್ರ
ಠಾಣೆ: ಸಂಚಾರ ನಿಯಮವನ್ನು ಉಲ್ಲಂಘಿಸಿದ ಆರೋಪದ ಮೇಲೆ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ₹2,000 ದಂಡ ವಿಧಿಸಲಾಗಿದೆ.
ಹೆಲ್ಮೆಟ್ ಧರಿಸದೇ ಸಂಚರಿಸುತ್ತಿದ್ದ ಸ್ಕೂಟರ್ ಸವಾರ ಹಾಗೂ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದ ಟ್ರಾಫಿಕ್ ಪೊಲೀಸ್ ನಡುವೆ ದಂಡದ ವಿಷಯಕ್ಕೆ ಜಗಳ ಮಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಟ್ರಾಫಿಕ್ ಪೊಲೀಸ್ ಸಂಚರಿಸುತ್ತಿದ್ದ ಬೈಕ್‌ನ ಮುಂಭಾಗದ ನಂಬರ್ ಪ್ಲೇಟ್ ಸ್ಪಷ್ಟವಾಗಿಲ್ಲ, ಅವರಿಗೂ ದಂಡ ವಿಧಿಸಬೇಕು ಎಂದು ಸ್ಕೂಟರ್ ಸವಾರ ಆಗ್ರಹಿಸುತ್ತಿರುವುದು ವಿಡಿಯೊದಲ್ಲಿದೆ.
ಸೋಮವಾರ ಈ ಘಟನೆ ಜರುಗಿದ್ದು, ಸಂಚಾರಿ ಪೊಲೀಸರು ಇಬ್ಬರಿಗೂ ದಂಡ ವಿಧಿಸಿದ್ದಾರೆ. ವಿಡಿಯೊದ ಆಧಾರದ ಮೇಲೆ ಹೆಚ್ಚಿನ ತನಿಖೆ ಮಾಡಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.