ADVERTISEMENT

ನೀಟ್ ಪರೀಕ್ಷೆ ವಂಚಿತರಾದ ಕರ್ನಾಟಕದ ವಿದ್ಯಾರ್ಥಿಗಳಿಗೆ ಇನ್ನೊಂದು ಅವಕಾಶ

ರೈಲು ವಿಳಂಬದಿಂದ ತಪ್ಪಿದ್ದ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 6 ಮೇ 2019, 17:44 IST
Last Updated 6 ಮೇ 2019, 17:44 IST
   

ನವದೆಹಲಿ: ಬೆಂಗಳೂರಿನಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌)ಗೆ ಹಂಪಿ ಎಕ್ಸ್‌ಪ್ರೆಸ್‌ ರೈಲು ವಿಳಂಬದಿಂದಾಗಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಇದೇ 20ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಮರು ಪರೀಕ್ಷೆ ನಡೆಯಲಿದೆ ಎಂದು ಕೇಂದ್ರಸರ್ಕಾರ ತಿಳಿಸಿದೆ.

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನೀಟ್ ಇತ್ತು. ರೈಲು ವಿಳಂಬದಿಂದಾಗಿ ರಾಜ್ಯದ ಉತ್ತರ ಕರ್ನಾಟಕ ಭಾಗದ 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ.

ಅಲ್ಲದೆ, ಪರೀಕ್ಷಾ ಕೇಂದ್ರಗಳ ಬದಲಾವಣೆಯಿಂದ ಉಂಟಾದ ಗೊಂದಲದಿಂದಾಗಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರಲಿಲ್ಲ.

ADVERTISEMENT

ಪರೀಕ್ಷಾ ಕೇಂದ್ರಗಳ ಬದಲಾವಣೆಯಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವ ಕುರಿತು ನ್ಯಾಷನಲ್‌ ಟೆಸ್ಟಿಂಗ್‌ ಏಜೆನ್ಸಿ (ಎನ್‌ಟಿಎ) ಪ್ರಕಟಣೆ ಸ್ಪಷ್ಟಪಡಿಸಿಲ್ಲ.

ಮರು ಪರೀಕ್ಷೆ ಬಗ್ಗೆ ಸಚಿವ ಪ್ರಕಾಶ್‌ ಜಾವಡೇಕರ್‌ ಟ್ವೀಟ್‌ನಲ್ಲಿಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.