ADVERTISEMENT

ರೈಲಿನಲ್ಲಿ ಗುಂಡಿನ ದಾಳಿ: ನ್ಯಾಯಾಂಗ ಬಂಧನಕ್ಕೆ ಆರೋಪಿ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2023, 15:28 IST
Last Updated 11 ಆಗಸ್ಟ್ 2023, 15:28 IST
   

ಮುಂಬೈ: ಚಲಿಸುತ್ತಿದ್ದ ರೈಲಿನಲ್ಲಿ ನಾಲ್ವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ರೈಲ್ವೆ ಸುರಕ್ಷತಾ ಪಡೆಯ (ಆರ್‌ಪಿಎಫ್‌) ಕಾನ್‌ಸ್ಟೆಬಲ್‌ ಚೇತನ್‌ ಸಿಂಗ್‌ ಅವರನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಿಚಾರಣಾ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಚೇತನ್‌ ಅವರನ್ನು ಬೋರಿವಲಿಯ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ರೈಲ್ವೆ ಪೊಲೀಸರು ಹೆಚ್ಚಿನ ವಿಚಾರಣೆಗೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡದ ಕಾರಣ ನ್ಯಾಯಾಲಯ ಚೇತನ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ADVERTISEMENT

ಅಲ್ಲದೇ, ಆರೋಪಿಯನ್ನು ಸುಳ್ಳುಪತ್ತೆ ಪರೀಕ್ಷೆ ಮತ್ತು ಮಂಪರು ಪರೀಕ್ಷೆಗೆ ಒಳಪಡಿಸಲು ತನಿಖಾ ಸಂಸ್ಥೆಗೆ ಕೋರ್ಟ್‌ ಅನುಮತಿ ನೀಡಲು ನಿರಾಕರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.