ADVERTISEMENT

ಗುಜರಾತ್‌ನ ಅಮ್ರೇಲಿಯಲ್ಲಿ ಖಾಸಗಿ ತರಬೇತಿ ವಿಮಾನ ಪತನ: ಪೈಲಟ್ ಸಾವು

ಪಿಟಿಐ
Published 22 ಏಪ್ರಿಲ್ 2025, 10:41 IST
Last Updated 22 ಏಪ್ರಿಲ್ 2025, 10:41 IST
<div class="paragraphs"><p>ವಿಡಿಯೊ ಸ್ಕ್ರೀನ್‌ಗ್ರಾಬ್‌&nbsp;</p></div>

ವಿಡಿಯೊ ಸ್ಕ್ರೀನ್‌ಗ್ರಾಬ್‌ 

   

(@ANI)

ಅಮ್ರೇಲಿ: ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಶಾಸ್ತ್ರಿ ನಗರ ಪ್ರದೇಶದಲ್ಲಿ ಮಂಗಳವಾರ ಖಾಸಗಿ ತರಬೇತಿ ವಿಮಾನ ಅಪಘಾತಕ್ಕೀಡಾಗಿದ್ದು, ಪೈಲಟ್ ಸಾವಿಗೀಡಾಗಿದ್ದಾರೆ.

ADVERTISEMENT

ಅನಿಕೇತ್ ಮಹಾಜನ್ ಮೃತ ಪೈಲಟ್.

ಖಾಸಗಿ ವಾಯುಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನ ಇಂದು ಮಧ್ಯಾಹ್ನ 12:30ರ ಸುಮಾರಿಗೆ ಶಾಸ್ತ್ರಿ ನಗರ ವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ತರಬೇತಿ ನಿರತ ಪೈಲಟ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಮ್ರೇಲಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಖಾರತ್ ತಿಳಿಸಿದ್ದಾರೆ.

ಅಮ್ರೇಲಿ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆಗಿತ್ತು. ಅನಿಕೇತ್ ಮಹಾಜನ್ ಒಬ್ಬರೇ ಏಕಾಂಗಿಯಾಗಿ ಹಾರಾಟ ನಡೆಸುತ್ತಿದ್ದರು. ವಿಮಾನ ತೆರೆದ ಪ್ರದೇಶಕ್ಕೆ ಅಪ್ಪಳಿಸುವ ಮೊದಲು ಮರದ ಮೇಲೆ ಬಿದ್ದಿದ್ದು, ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ಬೇರೆ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ಹೇಳಿದ್ದಾರೆ.

ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.