ಮುಂಬೈ: ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರನ್ನು ವಿಚಾರಣೆಗೆ ಒಳಪಡಿಸಬಹುದು. ಆದರೆ, ಬಂಧಿಸುವ ಅಗತ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಹೇಳಿದೆ.
ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯೂ ಆಗಿರುವ ಶಿವಸೇನಾ ಮುಖ್ಯಸ್ಥ ಏಕನಾಥ ಶಿಂದೆ ಅವರನ್ನು ‘ದೇಶದ್ರೋಹಿ’ ಎಂದು ಕರೆದಿರುವ ಆರೋಪದಲ್ಲಿ ಕುನಾಲ್ ವಿರುದ್ಧ ಖಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮ್ಮ ಮೇಲಿನ ಎಫ್‌ಐಆರ್ ರದ್ದು ಕೋರಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆದೇಶ ಕಾಯ್ದಿರಿಸಿತ್ತು. ಕಾಮ್ರಾ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ನೀಡಿತ್ತು.
ನ್ಯಾಯಮೂರ್ತಿಗಳಾದ ಸಾರಂಗ್ ಕೊತ್ವಾಲ್ ಮತ್ತು ಎಸ್.ಎಂ. ಮೊಡಕ್ ಅವರನ್ನು ಒಳಗೊಂಡ ನ್ಯಾಯಪೀಠವು, ವಾಕ್ ಸ್ವಾತಂತ್ರ್ಯದ ಮೇಲಿನ ನಿರ್ಬಂಧಗಳಿಗೆ ಸಂಬಂಧಿಸಿದ ವಿಶಾಲ ಮತ್ತು ಗಂಭೀರ ಸಮಸ್ಯೆಗಳನ್ನು ಪರಿಶೀಲಿಸಬೇಕಾಗಿದೆ. ಹಾಗಾಗಿ, ಈ ಅರ್ಜಿಯನ್ನು ವಿಸ್ತೃತವಾಗಿ ಆಲಿಸಲಾಗುವುದು. ಆದರೆ, ಈ ಪ್ರಕರಣದ ತನಿಖೆಗೆ ಸಂಪೂರ್ಣ ತಡೆಯಾಜ್ಞೆ ನೀಡಲು ಆಗದು. ತನಿಖೆ ಮುಂದುವರಿಸಬಹುದು, ಆದಾಗ್ಯೂ, ಅರ್ಜಿದಾರರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.