ADVERTISEMENT

ಯುಪಿ | 25 ದಿನಗಳಿಂದ ಕತ್ತಲೆಯಲ್ಲೇ ಜೀವನ ನಡೆಸುತ್ತಿರುವ ಗ್ರಾಮಸ್ಥರು: ಕಾರಣವೇನು?

​ಪ್ರಜಾವಾಣಿ ವಾರ್ತೆ
Published 8 ಜನವರಿ 2025, 14:44 IST
Last Updated 8 ಜನವರಿ 2025, 14:44 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಲಖನೌ: ವಿದ್ಯುತ್‌ ಪರಿವರ್ತಕ (ಟ್ರಾನ್ಸ್‌ಫಾರ್ಮರ್‌) ಕಳ್ಳತನವಾದ ಕಾರಣ ಸುಮಾರು ಒಂದು ತಿಂಗಳಿಂದ ವಿದ್ಯುತ್‌ ಪೂರೈಕೆ ಇಲ್ಲದೇ ಉತ್ತರ ಪ್ರದೇಶದ ಸೊರಹಾ ಗ್ರಾಮದ ಜನರು ಕತ್ತಲಲ್ಲಿಯೇ ಬದುಕು ನಡೆಸುತ್ತಿದ್ದಾರೆ.

250ಕೆವಿಎ ವಿದ್ಯುತ್ ಪರಿವರ್ತಕವನ್ನು ಹಾಳು ಮಾಡಿ, ಅದರಲ್ಲಿದ್ದ ತೈಲ ಸೇರಿದಂತೆ ಇನ್ನಿತರೆ ಘಟಕಗಳನ್ನು ಕಿಡಿಗೇಡಿಗಳು ಕಳ್ಳತನ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದರೂ ಯಾವುದೇ ಮಾಹಿತಿ ದೊರೆತಿಲ್ಲ. ಇನ್ನೊಂದೆಡೆ ವಿದ್ಯುತ್‌ ಇಲಾಖೆಯೂ ಹೊಸ ವಿದ್ಯುತ್‌ ಪರಿವರ್ತಕವನ್ನು ಅಳವಡಿಸಿಲ್ಲ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.

ಗ್ರಾಮದಲ್ಲಿ ಸುಮಾರು 5,000 ಜನರು ವಾಸಿಸುತ್ತಿದ್ದು, ಮುಸ್ಸಂಜೆಯಾಗುತ್ತಿದ್ದಂತೆಯೇ ನಾವೆಲ್ಲರೂ ಕಳದೆ 25 ದಿನಗಳಿಂದ ಕತ್ತಲೆಯಲ್ಲಿ ಜೀವನ ನಡೆಸುವಂತಾಗಿದೆ. ಫೆಬ್ರುವರಿಯಲ್ಲಿ ಪ್ರಾರಂಭವಾಗುವ ಪಿಯುಸಿ ಬೋರ್ಡ್‌ ಪರೀಕ್ಷೆಗಳಿಗೂ ಇಲ್ಲಿನ ವಿದ್ಯಾರ್ಥಿಗಳು ಓದುಕೊಳ್ಳಲು ಆಗುತ್ತಿಲ್ಲ ಎಂದು ಗ್ರಾಮಸ್ಥರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ವಿದ್ಯುತ್‌ ಕಡಿತದಿಂದಾಗಿ ವಿದ್ಯಾರ್ಥಿಗಳು ಸೇರಿದಂತೆ ಇಲ್ಲಿನ ನಿವಾಸಿಗಳ ದೈನಂದಿನ ಜೀವನ ಅಸ್ಥವ್ಯಸ್ತವಾಗಿದೆ. ಮೊಬೈಲ್ ಚಾರ್ಜಿಂಗ್‌ ಇಲ್ಲದೇ ಸಂಕಷ್ಟ ಎದುರಿಸುತ್ತಿದ್ದೇವೆ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

ಹೊಸ ಟ್ರಾನ್ಸ್‌ಫಾರ್ಮರ್‌ಗೆ ವ್ಯವಸ್ಥೆ ಮಾಡಲಾಗುವುದು ಎಂದು ಉಘೈಟಿ ವಿದ್ಯುತ್‌ ಸಬ್‌ಸ್ಟೇಷನ್‌ನ ಕಿರಿಯ ಎಂಜಿನಿಯರ್‌ ಅಶೋಕ್‌ ಕುಮಾರ್‌ ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.