ADVERTISEMENT

ಲೈಂಗಿಕ ಅಲ್ಪಸಂಖ್ಯಾತ ಕೈದಿಗಳ ದತ್ತಾಂಶ ಜೈಲು ವರದಿಯಲ್ಲಿ ಸೇರಿಸಲು ಸೂಚನೆ

ಪಿಟಿಐ
Published 7 ಡಿಸೆಂಬರ್ 2020, 12:14 IST
Last Updated 7 ಡಿಸೆಂಬರ್ 2020, 12:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: 2020ರಿಂದಜೈಲು ಅಂಕಿ ಅಂಶಗಳ ವರದಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ಕೈದಿಗಳ ದತ್ತಾಂಶವನ್ನು ಸೇರಿಸುವಂತೆ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ದೆಹಲಿ ಹೈ ಕೋರ್ಟ್‌ಗೆ ತಿಳಿಸಿದೆ.

ಲೈಂಗಿಕ ಅಲ್ಪಸಂಖ್ಯಾತ ಕೈದಿಗಳ ದತ್ತಾಂಶವನ್ನು ಜೈಲು ಅಂಕಿ ಅಂಶಗಳ ವರದಿಯಲ್ಲಿ ಸೇರಿಸಲು ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆ(ಎನ್‌ಸಿಆರ್‌ಬಿ)ಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯೆಯಾಗಿ ಕೇಂದ್ರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರು ಮುಖ್ಯ ನ್ಯಾಯಮೂರ್ತಿ ಡಿ.ಎನ್‌.ಪಟೇಲ್ ಮತ್ತು ನ್ಯಾಯಮೂರ್ತಿ ಪ್ರತೀಕ್ ಜಲಾನ್ ಅವರನ್ನೊಳ ಗೊಂಡ ಪೀಠಕ್ಕೆ ಈ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 4 ರಂದು ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈ ಮಾಹಿತಿಯನ್ನು ರವಾನಿಸಲಾಗಿದೆ ಎಂದು ಚೇತನ್ ಶರ್ಮಾ ತಿಳಿಸಿದ್ದಾರೆ. ಎಎಸ್‌ಜಿಯವರ ಪ್ರತಿಕ್ರಿಯೆ ಹಿನ್ನೆಯಲ್ಲೆಯಲ್ಲಿ, ಕರನ್ ತ್ರಿಪಾಟಿ ಅವರು ಪಿಐಎಲ್‌ ಅನ್ನು ನ್ಯಾಯಾಲಯ ಇತ್ಯರ್ಥಗೊಳಿಸಿದೆ. ಅಪರಾಧ ನ್ಯಾಯಾಂಗ ಮತ್ತು ಅಪರಾದಶಾಸ್ತ್ರ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸಂಶೋಧನೆ ನಡೆಸುತ್ತಿರುವ ಹಾಗೂ ಕಾನೂನು ಪತ್ರಕರ್ತರಾಗಿರುವ ಕರನ್ ತ್ರಿಪಾಠಿ ಅವರು, ಈ ಪಿಐಎಲ್‌ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.