ನವದೆಹಲಿ: ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ವಿಸ್ತರಣೆಗೆ ಸಂಬಂಧಿಸಿದಂತೆ ಬುಧವಾರ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ವಾಗ್ವಾದ ನಡೆದಿದ್ದರಿಂದ, ಲೋಕಸಭೆ ಕಲಾಪವನ್ನು ಅರ್ಧಗಂಟೆ ಮುಂದೂಡಲಾಯಿತು.
ಕಾಂಗ್ರೆಸ್‌ನ ಕುಮಾರಿ ಸೆಲ್ಜಾ ಸದಸ್ಯರನ್ನು ಸಮಾಧಾನಪಡಿಸಲು ಯತ್ನಿಸಿದರು. ಆದರೆ, ಎರಡೂ ಪಕ್ಷಗಳ ಸದಸ್ಯರು ಗದ್ದಲ ಮುಂದುವರಿಸಿದ್ದರಿಂದ ಕಲಾಪವನ್ನು ಮುಂದೂಡಲಾಯಿತು.
ಟಿಎಂಸಿಯ ಕೊಲಿ ಘೋಷ್ ದಸ್ತಿದಾರ್ ಅವರು, ಬಂಗಾಳಿಯಲ್ಲಿ ಮಣಿಪುರ ವಿಚಾರವನ್ನು ಪ್ರಸ್ತಾಪಿಸಿದರು.ಅವರ ಹೇಳಿಕೆಯೊಂದು ಆಡಳಿತ ಪಕ್ಷದ ಸದಸ್ಯರನ್ನು ಕೆರಳಿಸಿತು. ಈ ವಿಚಾರವಾಗಿ ವಾಕ್ಸಮರ ಮುಂದುವರಿಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.