ADVERTISEMENT

ಕುಲ್ಗಾಮ್‌: ಟಿಆರ್‌ಎಫ್‌ ಕಮಾಂಡರ್‌ ಸೇರಿ ನಾಲ್ವರು ಉಗ್ರರ ಹತ್ಯೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2021, 15:23 IST
Last Updated 17 ನವೆಂಬರ್ 2021, 15:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಉಗ್ರ ಸಂಘಟನೆ ಟಿಆರ್‌ಎಫ್‌ ಕಮಾಂಡರ್‌ ಅಫಾಕ್‌ ಸಿಕಂದರ್‌ ಸೇರಿ ನಾಲ್ವರು ಉಗ್ರರು ಹತರಾಗಿದ್ದಾರೆ.

ಕುಲ್ಗಾಮ್‌ ಜಿಲ್ಲೆಯ ಗೋಪ್ಲಪೋರಾ ಹಾಗೂ ಪೊಂಬೆ ಪ್ರದೇಶಗಳಲ್ಲಿ ಬುಧವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಯ ಗುಂಡಿಗೆ ನಾಲ್ವರು ಉಗ್ರರು ಬಲಿಯಾಗಿದ್ದಾರೆ.

ಈ ಎರಡೂ ಪ್ರದೇಶಗಳಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಸುಳಿವಿನ ಮೇರೆಗೆ ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು.ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸೇನಾ ಪ್ರತಿ ದಾಳಿಗೆ ನಾಲ್ವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಕಾಶ್ಮೀರ ವಲಯ ಐಜಿಪಿ ವಿಜಯಕುಮಾರ್‌ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ADVERTISEMENT

ಇಬ್ಬರು ಎಲ್‌ಇಟಿ ಉಗ್ರರ ಸೆರೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಬುಧವಾರ ಲಷ್ಕರ್‌–ಎ–ತೈಯಬಾ (ಎಲ್‌ಇಟಿ) ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.

ಅಮಿರ್‌ ಬಸೀರ್‌ ಮತ್ತು ಮುಖ್ತಾರ್‌ ಭಟ್‌ ಬಂಧಿತ ಉಗ್ರರು. ಪೊಲೀಸ್‌ ನಾಕಾಬಂಧಿ ಬಳಿ ಪುಲ್ವಾಮ ಪೊಲೀಸರು ಹಾಗೂ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ ಸಿಬ್ಬಂದಿ ನಡೆಸಿದ ತಪಾಸಣೆ ವೇಳೆ ಉಗ್ರರು ಸಿಕ್ಕಿಬಿದ್ದಿದ್ದಾರೆ. ಬಂಧಿತ ಉಗ್ರರಿಂದ ಎರಡು ಸುಧಾರಿತ ಸ್ಫೋಟಕ ಸಾಧನವನ್ನು ವಶಕ್ಕೆ ಪಡೆಯಲಾಗಿದ್ದು, ಪುಲ್ವಾಮ ಪೊಲೀಸರು ಹಾಗೂ ಭದ್ರತಾ ಪಡೆ ಸಿಬ್ಬಂದಿ ದುರಂತವೊಂದನ್ನು ತಪ್ಪಿಸಿದ್ದಾರೆ ಎಂದು ಕಾಶ್ಮೀರ ವಲಯ ಐಜಿಪಿ ವಿಜಯ್‌ಕುಮಾರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.