ADVERTISEMENT

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: 8 ಆರೋಪಿಗಳ ಬಂಧನ

ಪಿಟಿಐ
Published 8 ಜೂನ್ 2025, 15:40 IST
Last Updated 8 ಜೂನ್ 2025, 15:40 IST
.
.   

ಗೊಡ್ಡಾ: ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ 17 ವರ್ಷದ ಬಾಲಕಿಯ ಮೇಲೆ 10 ಜನರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಂದರ್‌ ಪಹಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಆರೋಪಿಗಳ ಪೈಕಿ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ಭಾನುವಾರ ನೀಡಿದ್ದಾರೆ. 

ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಂಬಂಧಿಕರ ಮನೆಗೆ ಬಂದಿದ್ದ ಬಾಲಕಿ, ಮನೆಯಿಂದ ಹೊರ ಹೋದಾಗ ಈ ಘಟನೆ ನಡೆದಿದೆ. ಈ ವೇಳೆ ವ್ಯಕ್ತಿಯೊಬ್ಬ ಬಾಲಕಿಯ ಬಾಯಿಗೆ ಬಟ್ಟೆ ತುರುಕಿ, ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದಾನೆ. ಅಲ್ಲಿ 10 ಜನರು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಈ ವಿಷಯವನ್ನು ಮುಚ್ಚಿಹಾಕಲು ಸ್ಥಳೀಯರು ಶನಿವಾರ ಪಂಚಾಯಿತಿ ಸಭೆ ನಡೆಸಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬದವರು ಆರೋಪ ಮಾಡಿದ್ದಾರೆ.   

ಈ ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಿಸಲಾಗಿದ್ದು, ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದಿಬ್ಬರ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮುಖೇಶ್‌ ಕುಮಾರ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.