ADVERTISEMENT

ಗುಜರಾತ್‌: ಬುಡಕಟ್ಟು ಸಮುದಾಯವನ್ನು ಕಡೆಗಣಿಸಿದ್ದ ಕಾಂಗ್ರೆಸ್; ಮೋದಿ ವಾಗ್ದಾಳಿ

ಗುಜರಾತ್‌: ಬಿರ್ಸಾಮುಂಡಾ ಜಯಂತಿ ಕಾರ್ಯಕ್ರಮದಲ್ಲಿ ಮೋದಿ ವಾಗ್ದಾಳಿ

ಪಿಟಿಐ
Published 15 ನವೆಂಬರ್ 2025, 16:13 IST
Last Updated 15 ನವೆಂಬರ್ 2025, 16:13 IST
ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿರುವ ಭಗವಾನ್‌ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪಾರ್ಚನೆ ಮಾಡಿದರು– ಪಿಟಿಐ ಚಿತ್ರ
ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿರುವ ಭಗವಾನ್‌ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪಾರ್ಚನೆ ಮಾಡಿದರು– ಪಿಟಿಐ ಚಿತ್ರ   

ಡೇಡಿಯಾಪಾಡಾ (ಗುಜರಾತ್‌): ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಬುಡಕಟ್ಟು ಸಮುದಾಯಗಳ ಕೊಡುಗೆ ಮಹತ್ತರವಾದದ್ದು. ಆದರೆ ಕಾಂಗ್ರೆಸ್‌ ತನ್ನ 60 ವರ್ಷಗಳ ಆಡಳಿತದಲ್ಲಿ ಅವರನ್ನು ಗುರುತಿಸದೆ, ಕಡೆಗಣಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದರು. 

ಭಗವಾನ್‌ ಬಿರ್ಸಾ ಮುಂಡಾ ಅವರ ಜನ್ಮದಿನದ ಅಂಗವಾಗಿ ಗುಜರಾತ್‌ನ ಡೇಡಿಯಾಪಾಡಾದಲ್ಲಿ ನಡೆದ ‘ಜನಜಾತೀಯ ಗೌರವ ದಿನ’ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ಹೋರಾಟಕ್ಕೆ ಬುಡಕಟ್ಟು ಜನರು ನೀಡಿದ ಕೊಡುಗೆಯನ್ನು ಕಡೆಗಣಿಸಿ, ಆ ಗೌರವವನ್ನು ಕೆಲ ಕುಟುಂಬಗಳಿಗೆ ಮಾತ್ರ ನೀಡಲಾಗಿದೆ’ ಎಂದು ಹೇಳಿದರು.

₹9700 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆಯನ್ನು ಪ್ರಧಾನಿ ಮೋದಿ ನೆರವೇರಿಸಿದರು. ಬುಡಕಟ್ಟು ಸಮುದಾಯದ ಕಲ್ಯಾಣಕ್ಕೆ ಸಂಬಂಧಿಸಿದ ಹಲವು ಯೋಜನೆಗಳೂ ಚಾಲನೆಗೊಂಡವು.

ADVERTISEMENT
ಗುಜರಾತ್‌ನ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಿದರು– ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.