ಖಾಂಡವಾ (ಮಧ್ಯಪ್ರದೇಶ): ಬುಡಕಟ್ಟು ಸಮುದಾಯದ 45 ವರ್ಷ ವಯಸ್ಸಿನ ಮಹಿಳೆಯೊಬ್ಬರ ಮೇಲೆ ಇಬ್ಬರು ಜಿಲ್ಲೆಯಲ್ಲಿ ಶನಿವಾರ ಅತ್ಯಾಚಾರ ಎಸಗಿದ್ದು, ಗಂಭೀರ ಸ್ವರೂಪದಲ್ಲಿ ಗಾಯಗೊಂಡಿರುವ ಮಹಿಳೆ ಮೃತಪಟ್ಟಿದ್ದಾರೆ.
ಸಾಮೂಹಿಕ ಅತ್ಯಾಚಾರ ಆರೋಪದಡಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರೋಶ್ನಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಿಳೆ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದು, ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ರಘುವಂಶಿ ತಿಳಿಸಿದ್ದಾರೆ.
ಶವದ ಮರಣೋತ್ತರ ಪರೀಕ್ಷೆಯ ವರದಿ ಬಳಿಕ ವಿವರ ಸಿಗಲಿದೆ. ಪೊಲೀಸರ ಪ್ರಕಾರ, ಮಹಿಳೆ ಮತ್ತು ಆರೋಪಿ ಶುಕ್ರವಾರ ಮದುವೆಗೆ ಹಾಜರಾಗಿದ್ದರು. ಸಂತ್ರಸ್ತೆಯನ್ನು ಕುಟುಂಬಸ್ಥರು ಆರೋಪಿಯ ಮನೆಯಿಂದ ಕರೆತಂದಿದ್ದರು.
ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಸಾವಿನ ಬಳಿಕ ದೂರು ನೀಡಲಾಗಿದೆ. ಆರೋಪಿಗಳು ಅಮಲೇರಿದ ಸ್ಥಿತಿಯಲ್ಲಿದ್ದು, ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.