ಸಾಂದರ್ಭಿಕ ಚಿತ್ರ
ಜೈಪುರ: ರಾಜಸ್ಥಾನದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯನ್ನು ಬೆತ್ತಲುಗೊಳಿಸಿ ಮೆರವಣಿಗೆ ನಡೆಸಿದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ವಿವರಣೆ ನೀಡಿರುವ ಬಾಂಸ್‌ವಾಡಾ ಐಜಿ ಎಸ್. ಪರಿಮಳ, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಓಡಿ ಹೋಗಲು ಯತ್ನಿಸಿದಾಗ ಆರೋಪಿಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನೆಯ ಹಿಂದಿನ ಎಲ್ಲ ಆರೋಪಿಗಳನ್ನು ಆದಷ್ಟು ಬೇಗನೇ ಬಂಧಿಸಲಾಗುವುದು ಎಂದು ಅವರು ಹೇಳಿದ್ದಾರೆ.
ರಾಜಸ್ಥಾನದ ಪ್ರತಾಪಗಢ ಜಿಲ್ಲೆಯಲ್ಲಿ 21 ವರ್ಷದ ಮಹಿಳೆಯನ್ನು ಆಕೆಯ ಪತಿಯೇ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿರುವ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.