ನವದೆಹಲಿ: ಭೂಸೇನಾದಿನದ ಅಂಗವಾಗಿ ಮಂಗಳವಾರ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಲಾಯಿತು.
ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್, ಭೂಸೇನಾ ಮುಖ್ಯಸ್ಥರಾದ ಜನರಲ್ ಮನೋಜ್ ಮುಕುಂದ್ ನರವಣೆ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ರಕ್ಷಣಾ ಪಡೆಗಳ ಸಿಬ್ಬಂದಿ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.