ADVERTISEMENT

ಶಿಂಜೊ ಅಬೆ ಸಾವು: ಗೌರವಾರ್ಥ ಶನಿವಾರ ತ್ರಿವರ್ಣ ಧ್ವಜ ಅರ್ಧಕ್ಕೆ ಇಳಿಕೆ

ಪಿಟಿಐ
Published 8 ಜುಲೈ 2022, 13:08 IST
Last Updated 8 ಜುಲೈ 2022, 13:08 IST
2018ರಲ್ಲಿ ಜಪಾನ್‌ ಪ್ರವಾಸ ಕೈಗೊಂಡಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು ಶಿಂಜೊ ಅಬೆ ಅವರ ಜೊತೆ ಮಾತುಕತೆ ನಡೆಸುತ್ತಿರುವ ಚಿತ್ರ | ಪಿಟಿಐ
2018ರಲ್ಲಿ ಜಪಾನ್‌ ಪ್ರವಾಸ ಕೈಗೊಂಡಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು ಶಿಂಜೊ ಅಬೆ ಅವರ ಜೊತೆ ಮಾತುಕತೆ ನಡೆಸುತ್ತಿರುವ ಚಿತ್ರ | ಪಿಟಿಐ   

ನವದೆಹಲಿ: ಗುಂಡಿನ ದಾಳಿಯಿಂದ ನಿಧನರಾದ ಜಪಾನ್‌ ಮಾಜಿ ಪ್ರಧಾನಿ ಶಿಂಜೊ ಅಬೆ (67) ಅವರಿಗೆ ಗೌರವಾರ್ಥ ಶನಿವಾರ ರಾಷ್ಟ್ರದಾದ್ಯಂತ ತ್ರಿವರ್ಣ ಧ್ವಜವನ್ನು ಅರ್ಧಕ್ಕೆ ಇಳಿಸಲು ನಿರ್ಧರಿಸಲಾಗಿದೆ.

ಕೇಂದ್ರ ಸರ್ಕಾರ ಶನಿವಾರ ಒಂದು ದಿನದ ಶೋಕಾಚರಣೆಯನ್ನು ಘೋಷಿಸಿದೆ.

ತ್ರಿವರ್ಣ ಧ್ವಜವಿರುವ ಎಲ್ಲ ಕಚೇರಿ, ಕಟ್ಟಡಗಳಲ್ಲಿ ಅರ್ಧಕ್ಕೆ ಇಳಿಸುವ ನಿರ್ಧಾರಕ್ಕೆ ಬರಲಾಗಿದೆ. ಮನರಂಜನೆ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಕಚೇರಿ ತಿಳಿಸಿದೆ.

ADVERTISEMENT

ಪಶ್ಚಿಮ ಜಪಾನ್‌ನ ನಾರಾ ನಗರದಲ್ಲಿ ಚುನಾವಣೆ ಪ್ರಚಾರದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಶಿಂಜೊ ಅಬೆ ಮೃತಪಟ್ಟಿದ್ದಾರೆ. ಇವರು ಜಪಾನ್‌ನ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

ಶಿಂಜೊ ಅಬೆ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಣೆ ಮಾಡಿದ್ದಾರೆ.

ಸಿಎಂ ಬೊಮ್ಮಾಯಿ ಪ್ರವಾಸ ಮುಂದೂಡಿಕೆ:
ಶನಿವಾರ ಮತ್ತು ಭಾನುವಾರಕ್ಕೆ ನಿಗದಿಯಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಪ್ರವಾಸವನ್ನು ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.