ADVERTISEMENT

ಕಸದ ವ್ಯಾನ್‌ಗಳಿಂದ ತ್ರಿವರ್ಣ ಧ್ವಜ ವಿತರಣೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2022, 13:30 IST
Last Updated 14 ಆಗಸ್ಟ್ 2022, 13:30 IST

ಲಖನೌ: ಉತ್ತರ ಪ್ರದೇಶದ ಅಯೋಧ್ಯೆ ನಗರದಲ್ಲಿ ಪ್ರಮುಖ ಸಂತರು ಮತ್ತು ಧರ್ಮದರ್ಶಿಗಳು ಆಯೋಜಿಸಿದ್ದ ತಿರಂಗಾ ಯಾತ್ರೆ ಸಂದರ್ಭದಲ್ಲಿ ಕಸದ ವ್ಯಾನ್‌ಗಳಿಂದ ತ್ರಿವರ್ಣ ಧ್ವಜ ವಿತರಣೆ ಮಾಡಲಾಗಿದ್ದು, ವಿರೋಧ ಪಕ್ಷಗಳಿಂದ ಭಾರಿ ಖಂಡನೆ ವ್ಯಕ್ತವಾಗಿದೆ.

ಅಯೋಧ್ಯೆ ಮುನ್ಸಿಪಲ್ ಕಾರ್ಪೊರೇಶನ್‌ ಸೇರಿದ ಕಸದ ವಾಹನದಿಂದ ಸಾರ್ವಜನಿಕರಿಗೆ ತ್ರಿವರ್ಣ ಧ್ವಜ ವಿತರಿಸುವ ವೇಳೆ ಅಯೋಧ್ಯೆ ಮೇಯರ್ ರಿಷಿಕೇಶ್ ಉಪಾಧ್ಯಾಯ, ಪೊಲೀಸರು ಮತ್ತು ನಾಗರಿಕ ಆಡಳಿತ ಅಧಿಕಾರಿಗಳು ಹಾಜರಿದ್ದರು.

ಕಸದ ವಾಹನದಿಂದ ತ್ರಿವರ್ಣ ಧ್ವಜ ವಿತರಿಸುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ADVERTISEMENT

ಮೇಯರ್ ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಆಚರಿಸುವ ನೆಪದಲ್ಲಿ ತ್ರಿವರ್ಣ ಧ್ವಜಕ್ಕೆ ತೋರಿದ ಅಗೌರವ ಖಂಡನೀಯ ಮತ್ತು ಅಕ್ಷಮ್ಯ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಕಸದ ವ್ಯಾನ್‌ನಿಂದ ತ್ರಿವರ್ಣ ಧ್ವಜಗಳನ್ನು ವಿತರಿಸುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.