ADVERTISEMENT

ಉ.ಪ್ರದೇಶ| ಅಯೋಧ್ಯೆಯಲ್ಲಿ ಕಸದ ವಾಹನದಲ್ಲಿ ರಾಷ್ಟ್ರಧ್ವಜ ವಿತರಣೆ; ಅಗೌರವ:ಅಖಿಲೇಶ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಆಗಸ್ಟ್ 2022, 13:41 IST
Last Updated 14 ಆಗಸ್ಟ್ 2022, 13:41 IST
ಟ್ವಿಟರ್ ಚಿತ್ರ
ಟ್ವಿಟರ್ ಚಿತ್ರ   

ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಕಸ ಸಂಗ್ರಹಣೆ ವಾಹನದಲ್ಲಿ ತ್ರಿವರ್ಣ ಧ್ವಜ ವಿತರಣೆ ಮಾಡಿರುವುದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

ಈ ಕುರಿತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದು, ಅಯೋಧ್ಯೆ ಮುನ್ಸಿಪಲ್ ಕಾರ್ಪೋರೇಷನ್ ಮೇಯರ್ ಸಮ್ಮುಖದಲ್ಲಿ ರಾಷ್ಟ್ರಧ್ವಜವನ್ನು ಕಸದ ಲಾರಿಯಲ್ಲಿ ಸಾಗಿಸಿ ವಿತರಣೆ ಮಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವುದು ಅಕ್ಷಮ್ಯ ಅಪರಾಧ ಎಂದು ಆರೋಪಿಸಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೆಸರಿನಲ್ಲಿ ರಾಷ್ಟ್ರಧ್ವಜಕ್ಕೆ ಈ ರೀತಿ ಅಗೌರವ ತೋರಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

ತಿರಂಗಾ ಯಾತ್ರೆ ಸಾಧು, ಸಂತರ ನೇತೃತ್ವದಲ್ಲಿ ನಡೆದಿದ್ದು, ಅಯೋಧ್ಯೆ ಮುನ್ಸಿಪಲ್ ಕಾರ್ಪೋರೇಷನ್‌ಗೆ ಸೇರಿದ ವಾಹನ ಇದಾಗಿದೆ ಎನ್ನಲಾಗಿದೆ. ಕಾರ್ಯಕ್ರಮದಲ್ಲಿ ಪೊಲೀಸರು, ಅಧಿಕಾರಿಗಳು ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.