ಅಹಮದಾಬಾದ್: ಗುಜರಾತ್ ಜೈಲಿನಲ್ಲಿರುವ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ನಾಯಕ ಸಾಕೇತ್ ಗೋಖಲೆ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.
ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರು ಕಳೆದ ಡಿಸೆಂಬರ್ ತಿಂಗಳಲ್ಲಿ ಬಂಧಿಸಿದ್ದರು.
ಇದೀಗ ಅವರನ್ನು ಇ.ಡಿ ಅಧಿಕಾರಿಗು ಬಂಧಿಸಿದ್ದು ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ ಎಂದು ಗುಜರಾತ್ ಪೊಲೀಸರು ಹೇಳಿದ್ದಾರೆ.
ಈ ಹಿಂದೆ ಗುಜರಾತ್‌ನ ಮೊರ್ಬಿ ಸೇತುವೆ ದುರಂತದ ಕುರಿತು ಸುಳ್ಳು ಟ್ವೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕೇತ್ ಗೋಖಲೆ ಅವರನ್ನು ಬಂಧಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.