ADVERTISEMENT

ತ್ರಿವಳಿ ತಲಾಖ್‌ ಮಸೂದೆ ಮಂಡನೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2018, 19:24 IST
Last Updated 17 ಡಿಸೆಂಬರ್ 2018, 19:24 IST
   

ನವದೆಹಲಿ: ಮುಸ್ಲಿಂ ಸಮುದಾಯದಲ್ಲಿ ವಿವಾಹ ವಿಚ್ಛೇದನಕ್ಕಾಗಿ ಅನುಸರಿಸುವ ತ್ರಿವಳಿ ತಲಾಖ್‌ ಪದ್ಧತಿಯನ್ನು ನಿಷೇಧಿಸುವ ಹೊಸ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ.

‘ಮುಸ್ಲಿಂ ಮಹಿಳೆಯರ (ವಿವಾಹ ಹಕ್ಕುಗಳ ರಕ್ಷಣೆ) ಮಸೂದೆ –2018’ ಅನ್ವಯ ತ್ರಿವಳಿ ತಲಾಖ್‌ ಕಾನೂನುಬಾಹಿರ ಮತ್ತು ಜಾಮೀನುರಹಿತ ಕ್ರಿಮಿನಲ್‌ ಅಪರಾಧವಾಗಲಿದೆ. ತಲಾಖ್‌ ನೀಡುವ ಮುಸ್ಲಿಂ ಪುರುಷರಿಗೆ ಮೂರು ವರ್ಷ ಜೈಲು ಶಿಕ್ಷೆಯ ಪ್ರಸ್ತಾವ ಈ ಮಸೂದೆಯಲ್ಲಿದೆ.

ಈ ಮೊದಲು ಮಂಡಿಸಲಾದ ತ್ರಿವಳಿ ತಲಾಖ್‌ ನಿಷೇಧ ಮಸೂದೆ ಲೋಕಸಭೆಯ ಅನುಮೋದನೆ ಪಡೆದಿತ್ತು. ಆದರೆ, ರಾಜ್ಯಸಭೆಯಲ್ಲಿ ಅಂಗೀಕಾರ ಆಗಿರಲಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ಸೆಪ್ಟೆಂಬರ್‌ನಲ್ಲಿ ಸುಗ್ರೀವಾಜ್ಞೆ ಹೊರಡಿಸಿತ್ತು.

ADVERTISEMENT

ಈ ಸುಗ್ರೀವಾಜ್ಞೆ ಆರು ತಿಂಗಳು ಜಾರಿಯಲ್ಲಿರುತ್ತದೆ. ಅಧಿವೇಶನ ಆರಂಭವಾದ 42 ದಿನಗಳಲ್ಲಿ ಹೊಸ ಮಸೂದೆಗೆ ಅಂಗೀಕಾರ ಪಡೆಯುವುದು ಕಡ್ಡಾಯ. ಇಲ್ಲದಿದ್ದರೆ ಸುಗ್ರೀವಾಜ್ಞೆ ರದ್ದಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.