ADVERTISEMENT

ತ್ರಿಪುರಾ | ಬಾಂಗ್ಲಾದ ಇಬ್ಬರು ಮಾದಕ ವಸ್ತು ಕಳ್ಳಸಾಗಣೆದಾರರ ಹತ್ಯೆ

ಪಿಟಿಐ
Published 26 ಜುಲೈ 2025, 13:51 IST
Last Updated 26 ಜುಲೈ 2025, 13:51 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಅಗರ್ತಲಾ: ತ್ರಿಪುರಾದ ಅಂತರರಾಷ್ಟ್ರೀಯ ಗಡಿ ಬಳಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ನಡೆಸಿದ ಗುಂಡಿನ ದಾಳಿಯಲ್ಲಿ ಬಾಂಗ್ಲಾದೇಶದ ಇಬ್ಬರು ಶಂಕಿತ ಮಾದಕ ವಸ್ತು ಕಳ್ಳಸಾಗಣೆದಾರರು ಹತರಾಗಿದ್ದಾರೆ. 

ಅಮ್ಜದ್‌ನಗರದಲ್ಲಿ ಬಿಎಸ್‌ಎಫ್‌ ನಡೆಸಿದ ಕಾರ್ಯಾಚರಣೆಯಲ್ಲಿ ಬಾಂಗ್ಲಾದೇಶದ ಒಬ್ಬರು ಗಾಯಗೊಂಡಿದ್ದು, ಭಾರತದ ಇಬ್ಬರು ಕಳ್ಳಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. 

ಭಾರಿ ಪ್ರಮಾಣದ ಮಾದಕ ವಸ್ತು ಕಳ್ಳಸಾಗಣೆ ಮಾಡುವ ಪ್ರಯತ್ನ ಕಂಡು ಬಂದಿತು. ಕಳ್ಳಸಾಗಣೆದಾರರು ದಾಳಿಗೆ ಮುಂದಾದರು. ಈ ವೇಳೆ ಗುಂಡಿನ ದಾಳಿ ನಡೆಸಲಾಯಿತು. ಸ್ಥಳದಲ್ಲಿ ₹15 ಲಕ್ಷ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.