ADVERTISEMENT

ತ್ರಿಪುರ ಸಿಎಂ ಬಿಪ್ಲಬ್ ದೇಬ್‌ಗೆ ಕೋವಿಡ್‌

ಏಜೆನ್ಸೀಸ್
Published 7 ಏಪ್ರಿಲ್ 2021, 9:06 IST
Last Updated 7 ಏಪ್ರಿಲ್ 2021, 9:06 IST
ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್‌ ದೇಬ್
ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್‌ ದೇಬ್   

ಅಗರ್ತಲಾ: ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್‌ ದೇಬ್ ಅವರಿಗೆ ಕೋವಿಡ್‌–19 ದೃಢಪಟ್ಟಿದ್ದು, ಆ ಬಗ್ಗೆ ಬುಧವಾರ ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ.

'ಪರೀಕ್ಷೆಯಲ್ಲಿ ನನಗೆ ಕೋವಿಡ್‌–19 ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದೇನೆ. ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ಅಗತ್ಯ ಕ್ರಮಗಳನ್ನು ಅನುಸರಿಸಿ ಮತ್ತುಸುರಕ್ಷಿತವಾಗಿರುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ' ಎಂದು ತ್ರಿಪುರ ಮುಖ್ಯಮಂತ್ರಿ ಟ್ವೀಟಿಸಿದ್ದಾರೆ.

ಭಾರತದಲ್ಲಿ ಬುಧವಾರ ಬೆಳಗ್ಗಿನವರೆಗೂ 24 ಗಂಟೆಗಳ ಅಂತರದಲ್ಲಿ 1.15 ಲಕ್ಷ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.