ADVERTISEMENT

ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಮುಂದಾದ ತ್ರಿಪುರ ಸರ್ಕಾರ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2025, 12:41 IST
Last Updated 5 ಸೆಪ್ಟೆಂಬರ್ 2025, 12:41 IST
   

ಅಗರ್ತಲಾ: ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಮಾಣಿಕ್ ಸಹಾ, ತ್ರಿಪುರ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲು, ಹೆಚ್ಚಿನ ಸಾಮರ್ಥ್ಯವುಳ್ಳ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ತಯಾರಿ ನಡೆಸುತ್ತಿದೆ ಎಂದು ಹೇಳಿದ್ದಾರೆ.

ತ್ರಿಪುರ ಸರ್ಕಾರವು ಕಳೆದ ಏಳು ವರ್ಷಗಳಲ್ಲಿ ವಿವಿಧ ವರ್ಗಗಳಲ್ಲಿ 19,800 ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿದೆ, ಅದರಲ್ಲಿ 5,215 ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ತ್ರಿಪುರ ಸರ್ಕಾರಿ ನೌಕರರು ಶೇ 33ರಷ್ಟು, ಕೇಂದ್ರ ಸರ್ಕಾರಿ ನೌಕರರು, ಶೇ 55ರಷ್ಟು ತುಟ್ಟಿ ಭತ್ಯೆ ಪಡೆಯುತ್ತಾರೆ ಎಂದು ತ್ರಿಪುರದ ಸಿಎಂ ಹೇಳಿದ್ದಾರೆ.

ADVERTISEMENT

ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರ ನಡುವಿನ ತುಟ್ಟಿ ಭತ್ಯೆ ಅಂತರವನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತ್ರಿಪುರದ ಮುಖ್ಯಮಂತ್ರಿ ಹೇಳಿದ್ದಾರೆ.

ನಾನು ಮುಖ್ಯಮಂತ್ರಿಯಾಗಿ 29 ತಿಂಗಳಲ್ಲಿ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಶೇ 29ಕ್ಕೆ ಹೆಚ್ಚಿಸಿದ್ದೇನೆ ಎಂದು ಮಾಣಿಕ್ ಸಹಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ತ್ರಿಪುರದಲ್ಲಿ ಪ್ರಸ್ತುತ ಮೂರು ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ 400 ಎಂಬಿಬಿಎಸ್ ಸೀಟುಗಳಿದ್ದು, ಅದನ್ನು 500ಕ್ಕೆ ಹೆಚ್ಚಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜನೆ ರೂಪಿಸುತ್ತಿದೆ ಎಂದು ಮಾಣಿಕ್ ಸಹಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.