ADVERTISEMENT

ತ್ರಿಪುರಾ: ಚುನಾವಣೆ ಮುಂದೂಡಲು ಸುಪ್ರೀಂಕೋರ್ಟ್ ನಕಾರ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2021, 20:00 IST
Last Updated 23 ನವೆಂಬರ್ 2021, 20:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ನವೆಂಬರ್ 25ಕ್ಕೆ ನಿಗದಿಯಾಗಿರುವ ತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಮುಂದೂಡುವಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿಲ್ಲ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಆರೋಪಿಸಿದ್ದ ಟಿಎಂಸಿ, ಚುನಾವಣೆ ಮುಂದೂಡುವಂತೆ ಕೋರಿತ್ತು. ಪ್ರಜಾ ಪ್ರಭುತ್ವದಲ್ಲಿ ಚುನಾವಣೆಯನ್ನು ಮುಂದೂಡುವುದು ತಪ್ಪು ಸಂಪ್ರ ದಾಯಕ್ಕೆ ನಾಂದಿಯಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಚುನಾವಣೆಗಳನ್ನು ಮುಂದೂಡುವುದು ಕೊನೆಯ ಆಯ್ಕೆ ಎಂದಿದೆ.

ಶಾಂತಿಯುತ ಚುನಾವಣೆ ನಡೆಸಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ತ್ರಿಪುರಾ ಐಜಿ ಮತ್ತು ಡಿಜಿಪಿ ಅವರಿಗೆ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ನಿರ್ದೇಶಿಸಿತು.ಶಾಂತಿಯುತ ಚುನಾವಣೆ ನಡೆಸಲು ಅಗತ್ಯವಾಗಿರುವ ಅರೆಸೇನಾಪಡೆ ಸಿಬ್ಬಂದಿ ಲಭ್ಯವಿದ್ದಾರೆಯೇ ಎಂಬುದರ ಕುರಿತಂತೆ ಬುಧವಾರ ಬೆಳಿಗ್ಗೆ ರಾಜ್ಯ ಚುನಾವಣಾ ಆಯುಕ್ತರ ಜೊತೆ ಮಾತುಕತೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದೆ.

ADVERTISEMENT

ಚುನಾವಣೆ ನಡೆಸಲು ಮಾಡಿ ಕೊಂಡಿರುವ ಸಿದ್ಧತೆಯ ಮಾಹಿತಿಯನ್ನು ತ್ರಿಪುರಾ ಸರ್ಕಾರದ ಪರ ವಕೀಲ ಮಹೇಶ್ ಜೇಠ್ಮಲಾನಿ ಅವರು ಕೋರ್ಟ್‌ಗೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.