ADVERTISEMENT

ತ್ರಿಪುರಾ | ಹಿಂಸಾಚಾರಕ್ಕೆ ‌‌‌ತಿರುಗಿದ ಬಂದ್‌: 10 ಮಂದಿಗೆ ಗಂಭೀರ ಗಾಯ

ಪಿಟಿಐ
Published 24 ಅಕ್ಟೋಬರ್ 2025, 3:03 IST
Last Updated 24 ಅಕ್ಟೋಬರ್ 2025, 3:03 IST
   

ಅಗರ್ತಲ: ತ್ರಿಪುರಾದ ಧಲೈ ಜಿಲ್ಲೆಯಲ್ಲಿ ಗುರುವಾರ ಸಂಜೆ ಸಂಘಟನೆಯೊಂದು ಬಂದ್‌ಗೆ ಕರೆ ನೀಡಿತ್ತು. ಈ ವೇಳೆ ಬಂದ್‌ ಹಿಂಸಾಚಾರಕ್ಕೆ ತಿರುಗಿದ್ದರಿಂದ ಸರ್ಕಾರ ನಿಷೇಧಾಜ್ಞೆ ಜಾರಿಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಿಪ್ರಾಸ ಒಪ್ಪಂದದ ಅನುಷ್ಠಾನ, ಅಕ್ರಮ ವಲಸಿಗರನ್ನು ಪತ್ತೆಹಚ್ಚುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಒತ್ತಾಯಿಸಿ ಇತ್ತೀಚೆಗೆ ರಚನೆಯಾದ 'ತ್ರಿಪುರ ನಾಗರಿಕ ಸಮಾಜ' ಸಂಘಟನೆ 24 ಗಂಟೆಗಳ ಬಂದ್‌ಗೆ ಕರೆ ನೀಡಿತ್ತು.

ಆದರೆ ಧಲೈನ ಕಮಲಪುರ ಉಪವಿಭಾಗದಲ್ಲಿರುವ ಶಾಂತಿನಗರ ಮಾರುಕಟ್ಟೆಯಲ್ಲಿ ಸಂಜೆ 6 ಗಂಟೆ ಸುಮಾರಿಗೆ ಅಂಗಡಿಯವರು ತಮ್ಮ ಅಂಗಡಿಗಳನ್ನು ತೆರೆಯಲು ಪ್ರಯತ್ನಿಸಿದಾಗ ಹಿಂಸಾಚಾರ ಭುಗಿಲೆದ್ದಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಬಂದ್ ಬೆಂಬಲಿಗರು ಅಂಗಡಿಯವರು ಮತ್ತು ಗ್ರಾಮಸ್ಥರ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿ, ಮನಬಂದಂತೆ ಕಲ್ಲು ತೂರಾಟ ನಡೆಸಿದರು. ಈ ವೇಳೆ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಲೇಮಾ ಸೇರಿದಂತೆ 10 ಜನರು ಗಾಯಗೊಂಡಿದ್ದಾರೆ ಎಂದು ತ್ರಿಪುರಾ ಪೊಲೀಸ್ ವಕ್ತಾರ ರಾಜ್‌ದೀಪ್ ದೇಬ್ ಮಾಹಿತಿ ನೀಡಿದ್ದಾರೆ.

ಈ ಘಟನೆ ಬಗ್ಗೆ ಮುಖ್ಯಮಂತ್ರಿ ಮಾಣಿಕ್ ಸಹಾ ಹಿಂಸಾಚಾರವನ್ನು ಖಂಡಿಸಿದ್ದು, ವ್ಯಕ್ತಿಗಳ ವಿರುದ್ಧ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.