ನವದೆಹಲಿ: ದೆಹಲಿಯಲ್ಲಿ 2020ರಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕಪಿಲ್ ಮಿಶ್ರಾ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಎಂದು ದೆಹಲಿ ನ್ಯಾಯಾಲಯವು ಮಂಗಳವಾರ ಆದೇಶಿಸಿದೆ.
‘ಗಲಭೆ ಸಂಭವಿಸಿದಾಗ ಮಿಶ್ರಾ ಅವರು ಅಲ್ಲಿ ಇದ್ದಿದ್ದು ಸ್ಪಷ್ಟವಾಗಿದೆ. ಮೇಲ್ನೋಟಕ್ಕೆ ಗುರುತಿಸಬಹುದಾದ ಅಪರಾಧ ಗೋಚರಿಸುತ್ತಿದೆ. ಆದ್ದರಿಂದ ತನಿಖೆಯ ಅಗತ್ಯವಿದೆ’ ಎಂದು ಹೆಚ್ಚುವರಿ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ವೈಭವ್ ಚೌರಾಸಿಯಾ ಹೇಳಿದ್ದಾರೆ.
ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಯಮುನಾ ವಿಹಾರ್‌ನ ನಿವಾಸಿ ಮೊಹಮದ್ ಇಲ್ಯಾಸ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ. ಗಲಭೆಯಲ್ಲಿ ಸಚಿವರ ಯಾವುದೇ ಪಾತ್ರವಿಲ್ಲ ಎಂದು ದೆಹಲಿ ಪೊಲೀಸರು ಈ ಅರ್ಜಿಯನ್ನು ವಿರೋಧಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.