ADVERTISEMENT

14 ದಿನಗಳ ನ್ಯಾಯಾಂಗ ಕಸ್ಟಡಿಗೆ ಬಾರ್ಕ್‌ನ ಮಾಜಿ ಸಿಇಒ ಪಾರ್ಥೊ ದಾಸ್‌ಗುಪ್ತಾ

ಟಿಆರ್‌ಪಿ ಹಗರಣದಲ್ಲಿ ಬಂಧನ

ಪಿಟಿಐ
Published 30 ಡಿಸೆಂಬರ್ 2020, 11:53 IST
Last Updated 30 ಡಿಸೆಂಬರ್ 2020, 11:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಟೆಲಿವಿಷನ್‌ ರೇಟಿಂಗ್‌ ಪಾಯಿಂಟ್ಸ್‌ (ಟಿಆರ್‌ಪಿ) ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಾರ್ಕ್‌ ಸಂಸ್ಥೆಯ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾರ್ಥೊ ದಾಸ್‌ಗುಪ್ತಾ ಅವರನ್ನು ಇಲ್ಲಿನ ನ್ಯಾಯಾಲಯವೊಂದು 14 ದಿನಗಳ ನ್ಯಾಯಾಂಗ ಕಸ್ಟಡಿಗೆ ಬುಧವಾರ ನೀಡಿದೆ.

ಪೊಲೀಸ್‌ ಕಸ್ಟಡಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೇ ವೇಳೆ ದಾಸ್‌ಗುಪ್ತಾ ತಮ್ಮ ಜಾಮೀನು ಅರ್ಜಿ ಸಲ್ಲಿಸಿದರು. ‘ದಾಸ್‌ಗುಪ್ತಾ ಅವರ ಮೇಲೆ ನಿರ್ದೇಶಕರ ಮಂಡಳಿ, ಶಿಸ್ತು ಸಮಿತಿಯಿದ್ದು, ಇವರು ರೇಟಿಂಗ್‌ ವ್ಯವಸ್ಥೆಯನ್ನು ತಿರುಚಿರಲು ಸಾಧ್ಯವಿಲ್ಲ’ ಎಂದು ಅವರ ಪರ ವಕೀಲ ಕಮಲೇಶ್‌ ಘುಮ್ರೆ ಹೇಳಿದರು. ಜ.1ರಂದು ಈ ಅರ್ಜಿಯ ವಿಚಾರಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT