ADVERTISEMENT

ಇಂದೋರ್‌: ಪಾದಚಾರಿಗಳ ಮೇಲೆ ಟ್ರಕ್‌ ಹರಿದು ಇಬ್ಬರು ಸಾವು

ಪಿಟಿಐ
Published 15 ಸೆಪ್ಟೆಂಬರ್ 2025, 23:41 IST
Last Updated 15 ಸೆಪ್ಟೆಂಬರ್ 2025, 23:41 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಇಂದೋರ್‌: ಇಲ್ಲಿನ ಏರೋಡ್ರೋಮ್‌ ರಸ್ತೆಯಲ್ಲಿ ಸೋಮವಾರ ರಾತ್ರಿ ವೇಳೆ ನಿಯಂತ್ರಣ ತಪ್ಪಿದ ಟ್ರಕ್‌ವೊಂದು ಹಲವು ಪಾದಚಾರಿಗಳ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ.

ADVERTISEMENT

‘ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದ ಕಾರಣ ಟ್ರಕ್‌ಗೆ ಬೆಂಕಿ ಹತ್ತಿಕೊಂಡಿದೆ. ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಹೆಚ್ಚುವರಿ ಆಯುಕ್ತ ಅಮಿತ್‌ ಸಿಂಗ್ ತಿಳಿಸಿದ್ದಾರೆ.

‘ಸಣ್ಣಪುಟ್ಟ ಗಾಯಗಳಾದ ಮೂರರಿಂದ ನಾಲ್ವರಿಗೆ ಚಿಕಿತ್ಸೆ ನೀಡಿ, ಮನೆಗೆ ಕಳುಹಿಸಲಾಗಿದೆ’ ಎಂದು ಆಯುಕ್ತ ಸಂತೋಷ್‌ ಕುಮಾರ್‌ ಸಿಂಗ್‌ ವಿವರಿಸಿದ್ದಾರೆ.

ಘಟನೆ ಕುರಿತು ಮುಖ್ಯಮಂತ್ರಿ ಮೋಹನ್‌ ಯಾದವ್‌ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯನ್ನು ಸ್ಥಳಕ್ಕೆ ಭೇಟಿ ನೀಡುವಂತೆ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.