ADVERTISEMENT

ಬಿಜೆಪಿ ಸಂಸದರ ಗಲಾಟೆ ಆರೋಪ: ತನಿಖೆಯಿಂದ ಸತ್ಯ ಬಯಲಾಗಲಿದೆ, ಜ್ಯೋತಿರಾದಿತ್ಯ

ಪಿಟಿಐ
Published 4 ಸೆಪ್ಟೆಂಬರ್ 2022, 2:44 IST
Last Updated 4 ಸೆಪ್ಟೆಂಬರ್ 2022, 2:44 IST
ಜ್ಯೋತಿರಾದಿತ್ಯ ಸಿಂಧಿಯಾ
ಜ್ಯೋತಿರಾದಿತ್ಯ ಸಿಂಧಿಯಾ   

ಇಂದೋರ್‌: ಜಾರ್ಖಂಡ್‌ನ ದೇವಘರ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದರಾದ ನಿಶಿಕಾಂತ್‌ ದುಬೆ ಮತ್ತು ಮನೋಜ್‌ ತಿವಾರಿ ಸೇರಿದಂತೆ ಒಂಬತ್ತು ಮಂದಿ ವಿರುದ್ಧ ದೂರು ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಪ್ರತಿಕ್ರಿಯಿಸಿದ್ದಾರೆ. ತನಿಖೆಯಿಂದ ಸತ್ಯ ಬಯಲಾಗಲಿದೆ ಎಂದಿದ್ದಾರೆ.

ಚಾರ್ಟೆಡ್‌ ವಿಮಾನ ಹಾರಾಟಕ್ಕೆ ಶೀಘ್ರಗತಿಯಲ್ಲಿ ರನ್‌ವೇ ಮುಕ್ತಗೊಳಿಸಿಕೊಡಬೇಕು ಎಂದು ವಾಯು ಸಂಚಾರ ನಿಯಂತ್ರಣ (ಎಟಿಸಿ) ಅಧಿಕಾರಿಗಳಿಗೆ ಬಲವಂತ ಪಡಿಸಿದ ಆರೋಪಕ್ಕೆ ಸಂಬಂಧಿಸಿ ಒಂಬತ್ತು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಜಾರ್ಖಂಡ್‌ನ ದುಮ್ಕಾದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ದೆಹಲಿಗೆ ವಾಪಸ್‌ ಆಗುವ ಸಂದರ್ಭದಲ್ಲಿ ಸಂಸದರು ಮತ್ತು ಇತರ ಏಳು ಮಂದಿ ಆಗಸ್ಟ್‌ 31ರಂದು ವಿಮಾನ ನಿಲ್ದಾಣದಲ್ಲಿ ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ADVERTISEMENT

ದುಬೆ ಅವರ ದೂರಿನ ಅನ್ವಯ ದೆಹಲಿ ಪೊಲೀಸರು ದೇವಘರದ ಜಿಲ್ಲಾಧಿಕಾರಿ ಮತ್ತು ಇತರ ಪೊಲೀಸ್‌ ಅಧಿಕಾರಿಗಳ ವಿರುದ್ಧ ದೇಶದ್ರೋಹ ಮತ್ತು ಅಫೀಶಿಯಲ್‌ ಸೀಕ್ರೆಟ್ಸ್‌ ಕಾಯ್ದೆ ಅಡಿ ಝಿರೋ ಎಫ್‌ಐಆರ್‌ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.