ತಿರುಮಲ ತಿರುಪತಿ ದೇಗುಲ
ಹೈದರಾಬಾದ್: ಭಾರತ ಮತ್ತು ಪಾಕಿಸ್ತಾನ ನಡುವಿನ ಬಿಕ್ಕಟ್ಟಿನ ಮಧ್ಯೆ ತಿರುಪತಿಯಲ್ಲಿ ಡ್ರೋನ್ ಹಾರಾಟವನ್ನು ನಿಷೇಧಿಸುವ ಸಲುವಾಗಿ ಹಾಗೂ ದೇವಾಲಯದ ಸುರಕ್ಷತೆಯ ದೃಷ್ಟಿಯಿಂದ ಡ್ರೋನ್ ವಿರೋಧಿ ತಂತ್ರಜ್ಞಾನವನ್ನು ಅಳವಡಿಸಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ತೀರ್ಮಾನಿಸಿದೆ.
ತಿರುಮಲ ದೇವಾಲಯದ ಭದ್ರತಾ ವಿಷಯವನ್ನು ಗಮನದಲ್ಲಿಟ್ಟುಕೊಂಡು ಡ್ರೋನ್ ವಿರೋಧಿ ತಂತ್ರಜ್ಞಾನವನ್ನು ಜಾರಿಗೆ ತರುವ ನಿರ್ಧಾರವನ್ನು ಟಿಟಿಡಿ ಮಂಡಳಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಜೆ ಶ್ಯಾಮಲಾ ರಾವ್ ಹೇಳಿದ್ದಾರೆ.
ಜಾಗತಿಕವಾಗಿ ಅತ್ಯಂತ ಶ್ರೀಮಂತ ಹಿಂದೂ ದೇವಾಲಯಗಳಲ್ಲಿ ಒಂದಾದ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನ ಮತ್ತು ಭಕ್ತರನ್ನು ಸುರಕ್ಷತೆಗಾಗಿ ಸಲುವಾಗಿ ಅತ್ಯಾಧುನಿಕ ಬಹು-ಹಂತದ ಭದ್ರತಾ ವ್ಯವಸ್ಥೆಯನ್ನು ನಿರ್ವಹಿಸುತ್ತದೆ. ಇದರಲ್ಲಿ ಟಿಟಿಡಿ ಮತ್ತು ಆಂಧ್ರಪ್ರದೇಶ ಪೊಲೀಸರ ಪೊಲೀಸರ ನಡುವಿನ ಸಂಘಟಿತ ಸಹಕಾರ, ಆಕ್ಟೋಪಸ್ (ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಸಂಘಟನೆ) ಅಂತಹ ವಿಶೇಷ ಭಯೋತ್ಪಾದನಾ ವಿರೋಧಿ ಘಟಕಗಳ ನಿಯೋಜನೆ ಮತ್ತು ಕಠಿಣ ವಾಹನಗಳ ತಪಾಸಣೆ ಪ್ರೋಟೊಕಾಲ್‌ಗಳು ಸೇರಿವೆ.
ಪ್ರತಿನಿತ್ಯ ತಿರುಪತಿ ದೇವಾಲಯಕ್ಕೆ 70 ಸಾವಿರದಿಂದ 80 ಸಾವಿರ ಭಕ್ತರು ಭೇಟಿ ನೀಡುತ್ತಾರೆ. ವಿಶೇಷ ಸಂದರ್ಭಗಳಲ್ಲಿ ಈ ಸಂಖ್ಯೆ 1 ಲಕ್ಷಕ್ಕೂ ಅಧಿಕವಿರುತ್ತದೆ. ಭಯೋತ್ಪಾದನಾ ವಿರೋಧಿ ಕಮಾಂಡೊ ಘಟಕವಾದ ಆಕ್ಟೋಪಸ್, ತಿರುಮಲದಲ್ಲಿ ಭದ್ರತಾ ಕಾರ್ಯಾಚರಣೆಗಳ ಜವಾಬ್ದಾರಿಯನ್ನು ಹೊಂದಿದ್ದು, ಇತರೆ ಭದ್ರತಾ ಸಿಬ್ಬಂದಿಯೊಂದಿಗೆ ಕೆಲಸ ಮಾಡುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.