ಕರ್ನಲ್ ಸೋಫಿಯಾ ಖುರೇಷಿ
ನವದೆಹಲಿ: ಟರ್ಕಿ ನಿರ್ಮಿತ ಡ್ರೋನ್‌ಗಳನ್ನು ಬಳಸಿ 36 ಸ್ಥಳಗಳ ಮೇಲೆ ದಾಳಿ ಮಾಡಲು ಪಾಕಿಸ್ತಾನ ಯತ್ನಿಸಿದೆ. ನಮ್ಮ ಸಶಸ್ತ್ರ ಪಡೆಗಳು ಅವುಗಳಲ್ಲಿ ಹಲವು ಡ್ರೋನ್‌ಗಳನ್ನು ಹೊಡೆದುರುಳಿಸಿವೆ ಎಂದು ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ.
ವಿದೇಶಾಂಗ ಸಚಿವಾಲಯ ಹಾಗೂ ರಕ್ಷಣಾ ಸಚಿವಾಲಯ ನಡೆಸಿದ ಜಂಟಿ ಪ್ರತಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.
ಸೇನಾ ಮೂಲಸೌಕರ್ಯಗಳನ್ನು ಗುರಿಯಾಗಿಸುವ ಉದ್ದೇಶದಿಂದ ಪಾಕಿಸ್ತಾನ ಸೇನೆ, ಮೇ 7 ಮತ್ತು 8 ರ ರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಭಾರತೀಯ ವಾಯು ಸೀಮೆಯನ್ನು ಹಲವಾರು ಬಾರಿ ಉಲ್ಲಂಘಿಸಿದೆ. ಅಲ್ಲದೇ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರಿ ಸಾಮರ್ಥ್ಯದ ಶಸ್ತ್ರಾಸ್ತ್ರಗಳನ್ನು ಬಳಸಿ ದಾಳಿ ನಡೆಸಿದೆ ಎಂದು ಅವರು ಹೇಳಿದ್ದಾರೆ.
36 ಸ್ಥಳಗಳನ್ನು ಗುರಿಯಾಗಿಸಿ ಅವರು ಸುಮಾರು 300 ರಿಂದ 400 ಡ್ರೋನ್‌ಗಳನ್ನು ಬಳಸಿ ದಾಳಿ ನಡೆಸಿದ್ದಾರೆ. ಆದರೆ ಭಾರತೀಯ ಸಶಸ್ತ್ರ ಪಡೆಗಳು ಹಲವು ಡ್ರೋನ್‌ಗಳನ್ನು ಹೊಡೆದುರುಳಿಸಿವೆ ಎಂದು ತಿಳಿಸಿದ್ದಾರೆ.
ಡ್ರೋನ್‌ಗಳ ಅವಶೇಷಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ಅವುಗಳು ಟರ್ಕಿಶ್ ಅಸಿಸ್‌ಗಾರ್ಡ್ ಸಾಂಗರ್ ಡ್ರೋನ್‌ಗಳು ಎಂದು ತಿಳಿದು ಬಂದಿದೆ ಎಂದು ಖುರೇಷಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.