
ತುರ್ಕ್‌ಮಾನ್ ಗೇಟ್ ಪ್ರದೇಶದ ಸೈಯೆದ್ ಫೈಝ್ ಇಲಾಹಿ ಮಸೀದಿ ಬಳಿ ಭದ್ರತಾ ಸಿಬ್ಬಂದಿ ಗುರುವಾರ ಕಾವಲು ಕಾಯುತ್ತಿರುವುದು
-ಪಿಟಿಐ ಚಿತ್ರ
ನವದೆಹಲಿ: ತುರ್ಕ್‌ಮಾನ್ ಗೇಟ್ ಕಲ್ಲುತೂರಾಟ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ 16ಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ಹೇಳಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಮತ್ತು ಅರೆಸೈನಿಕ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದೇ ವೇಳೆ ಹಿರಿಯ ಅಧಿಕಾರಿಗಳು ಶುಕ್ರವಾರದ ಪ್ರಾರ್ಥನೆಗಾಗಿ ಮೈದಾನದ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿದ್ದಾರೆ.
ಡ್ರೋನ್ ಮತ್ತು ಸಿ.ಸಿ.ಟಿ.ವಿ. ಕ್ಯಾಮೆರಾಗಳ ಮೂಲಕ ಪೊಲೀಸರು ಪ್ರದೇಶದಲ್ಲಿ ಬಿಗಿ ಕಣ್ಗಾವಲು ನಡೆಸುತ್ತಿದ್ದಾರೆ. ಪರಿಸ್ಥಿತಿ ಶಾಂತಿಯುತವಾಗಿದ್ದು, ನಿಯಂತ್ರಣದಲ್ಲಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖೆಯ ಭಾಗವಾಗಿ, ಘಟನೆಗೆ ಸಂಬಂಧಿಸಿ ತಪ್ಪು ಮಾಹಿತಿಗಳನ್ನು ಹರಡುತ್ತಿರುವ 10 ಸಾಮಾಜಿಕ ಮಾಧ್ಯಮ ಪ್ರಭಾವಿಗಳನ್ನು ಗುರುತಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.