
ಪಿಟಿಐ
ಸೇಲಂ: ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಅವರ ನೇತೃತ್ವದಲ್ಲಿ ಡಿ.4ರಂದು ರ‍್ಯಾಲಿ ನಡೆಸಲು ಅನುಮತಿ ನೀಡುವಂತೆ ಪಕ್ಷದ ಪದಾಧಿಕಾರಿಗಳು ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.
ಬೋಸ್ ಮೈದಾನ, ಕೊಟೈ ಮೈದಾನ ಸೇರಿದಂತೆ ಮೂರು ಸ್ಥಳಗಳನ್ನು ಟಿವಿಕೆ ಗೊತ್ತುಪಡಿಸಿದೆ. ಆದರೆ, ಆ ದಿನದಂದು ರ‍್ಯಾಲಿ ಆಯೋಜನೆಗೆ ಅನುಮತಿ ನೀಡಲು ಕೆಲ ಸಮಸ್ಯೆಗಳಿರುವುದರಿಂದ ಹೊಸ ದಿನವನ್ನು ನಿಗದಿಪಡಿಸುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರೂರಿನಲ್ಲಿ ಸೆ.27ರಂದು ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಬಳಿಕ ಟಿವಿಕೆ ಪಕ್ಷದವರು ರ‍್ಯಾಲಿ ಅಥವಾ ಸಾರ್ವಜನಿಕ ಸಭೆಗೆ ಅನುಮತಿ ಕೋರಿ ಅಧಿಕಾರಿಗಳನ್ನು ಸಂಪರ್ಕಿಸಿದ್ದು ಇದೇ ಮೊದಲು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.