ತಿರುವನಂತಪುರ: ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಾಣು
ಸೋಂಕಿನಿಂದ 12 ವರ್ಷದ ಬಾಲಕ ಭಾನುವಾರ ಮೃತಪಟ್ಟಿದ್ದಾನೆ.
ಬಾಲಕನಲ್ಲಿ ಮಿದುಳು ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹಾಗಿದ್ದರೂ ಆತನನ್ನು ನಿಫಾ ಪರೀಕ್ಷೆಗೆ ಒಳಪಡಿಸಿರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಬಾಲಕನ ಸಂಪರ್ಕಕ್ಕೆ ಬಂದಿದ್ದ ಆಸ್ಪತ್ರೆಯ ಇಬ್ಬರು ಸಿಬ್ಬಂದಿಯಲ್ಲಿ ನಿಫಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಬಾಲಕನ ಮನೆಯ ಸುತ್ತಲಿನ ಮೂರು ಕಿ.ಮೀ. ಪ್ರದೇಶವನ್ನು ಕಂಟೈನ್‌ಮೆಂಟ್ ವಲಯ ಎಂದು ಗುರುತಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.