ADVERTISEMENT

ಛತ್ತೀಸಗಢ: 22 ನಕ್ಸಲರ ಶರಣಾಗತಿ

ಪಿಟಿಐ
Published 17 ಫೆಬ್ರುವರಿ 2026, 15:45 IST
Last Updated 17 ಫೆಬ್ರುವರಿ 2026, 15:45 IST
..
..   

ಸುಕ್ಮಾ : ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ 22 ಮಂದಿ ನಕ್ಸಲರು ಪೊಲೀಸರ ಮುಂದೆ ಮಂಗಳವಾರ ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯಿಂದ ಪ್ರಭಾವಿತಗೊಂಡು ಹಿರಿಯ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಸುಕ್ಮಾ ಪೊಲೀಸ್‌ ವರಿಷ್ಠಾಧಿಕಾರಿ ಕಿರಣ್‌ ಚವಾಣ್‌ ತಿಳಿಸಿದ್ದಾರೆ.

‘ಜಿಲ್ಲೆಯಲ್ಲಿ ನಕ್ಸಲ್‌ ವಿರೋಧಿ ಕಾರ್ಯಾಚರಣೆಗಳು ತೀವ್ರಗೊಂಡ ಬಳಿಕ ನಕ್ಸಲರ ಚಟುವಟಿಕೆ ಕಡಿಮೆಯಾಗಿದೆ. ಸರ್ಕಾರದ ನೀತಿಯ ಪ್ರಕಾರ ಶರಣಾದ ಎಲ್ಲ ನಕ್ಸಲರಿಗೆ ತಕ್ಷಣವೇ ತಲಾ ₹50,000 ನೆರವು ಹಾಗೂ ಪುನರ್‌ವಸತಿ ಸೌಲಭ್ಯ ಕಲ್ಪಿಸಿಕೊಡಲಾಗುವುದು’ ಎಂದು ಅವರು ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.