ADVERTISEMENT

ಹೊಸ ಐಟಿ ನಿಯಮಗಳನ್ನು ಪಾಲಿಸಿ: ಟ್ವಿಟರ್‌ಗೆ ದೆಹಲಿ ಹೈಕೋರ್ಟ್‌ ಸೂಚನೆ

ಪಿಟಿಐ
Published 31 ಮೇ 2021, 10:20 IST
Last Updated 31 ಮೇ 2021, 10:20 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೇಂದ್ರ ಸರ್ಕಾರ ಡಿಜಿಟಲ್ ಮಾಧ್ಯಮಗಳಿಗಾಗಿ ಜಾರಿಗೆ ತಂದಿರುವ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಟ್ವಿಟರ್ಪಾಲಿಸಬೇಕು ಎಂದು ದೆಹಲಿ ಹೈಕೋರ್ಟ್‌ ಸೋಮವಾರ ತಿಳಿಸಿದೆ.

ನ್ಯಾಯಮೂರ್ತಿ ರೇಖಾ ಪಲ್ಲಿ ಅವರು ಈ ಸೂಚನೆ ನೀಡಿದ್ದಲ್ಲದೆ, 'ಟ್ವಿಟರ್ ನಿಯಮಗಳನ್ನು ಪಾಲಿಸುತ್ತಿಲ್ಲ'ಎಂದು ವಕೀಲ ಅಮಿತ್ ಆಚಾರ್ಯ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ಟ್ವಿಟರ್‌ಗೆ ನೋಟಿಸ್‌ ಜಾರಿಗೊಳಿಸಿದರು.

ಇದಕ್ಕೂ ಮುನ್ನ ನ್ಯಾಯಾಲಯದ ಮುಂದೆ ಹಾಜರಾದ ಟ್ವಿಟರ್‌, 'ನಾವು ನಿಯಮಗಳನ್ನು ಪಾಲಿಸುತ್ತಿದ್ದೇವೆ ಮತ್ತು ಇದಕ್ಕೆ ಸಂಬಂಧಿಸಿಂತೆ ಕುಂದುಕೊರತೆ ಆಲಿಸಲು ಅಧಿಕಾರಿಯನ್ನು ನೇಮಿಸಿದ್ದೇವೆ, ಆದರೆ, ಕೇಂದ್ರ ಸರ್ಕಾರವು ತಮ್ಮ ಹೇಳಿಕೆಯನ್ನು ವಿವಾದವಾಗಿಸಿದೆ'ಎಂದು ತಿಳಿಸಿತ್ತು. ಆದರೆ ಸರ್ಕಾರದ ಪರ ವಕೀಲ ರಿಪುದಮನ್‌ ಸಿಂಗ್ ಭಾರದ್ವಾಜ್ ಅವರು ಈ ವಾದವನ್ನು ಅಲ್ಲಗಳೆದರು.

ADVERTISEMENT

ಹೊಸ ಐಟಿ ನಿಯಮಗಳು ಫೆಬ್ರವರಿ 25 ರಿಂದ ಜಾರಿಗೆ ಬಂದಿವೆ. ಅವುಗಳನ್ನು ಅನುಸರಿಸಲು ಕೇಂದ್ರವು ಟ್ವಿಟರ್ ಸೇರಿದಂತೆ ಪ್ರತಿ ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ಮೂರು ತಿಂಗಳು ಕಾಲಾವಕಾಶ ನೀಡಿದೆ ಎಂದು ಆಚಾರ್ಯ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.