ADVERTISEMENT

ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ದಾಳಿ: ಟ್ವಿಟರ್ ವಿರುದ್ಧ ರಾಹುಲ್ ಕಿಡಿ

ಟ್ವಿಟರ್ ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತಿದೆ: ರಾಹುಲ್ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಆಗಸ್ಟ್ 2021, 6:00 IST
Last Updated 13 ಆಗಸ್ಟ್ 2021, 6:00 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಟ್ವಿಟರ್ ಖಾತೆಯನ್ನು ಸ್ಥಗಿತಗೊಳಿಸಿದ ಕಂಪನಿ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ ಎಂದುಆರೋಪಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ಥರ ಜತೆಗಿನ ಫೋಟೊದೊಂದಿಗೆ ರಾಹುಲ್ ಗಾಂಧಿ ಇತ್ತೀಚೆಗೆ ಮಾಡಿದ್ದ ಪೋಸ್ಟ್ ಅನ್ನು ತೆಗೆದು ಹಾಕಿದ್ದ ಟ್ವಿಟರ್, ಖಾತೆಯನ್ನು ಸ್ಥಗಿತಗೊಳಿಸಿತ್ತು.

ಇದರ ವಿರುದ್ಧ ಆಕ್ರೋಶಗೊಂಡಿರುವ ರಾಹುಲ್, ಯೂಟ್ಯೂಬ್ ಚಾನೆಲ್‌ನಲ್ಲಿ ತಿರುಗೇಟು ನೀಡಿದ್ದಾರೆ. 'ಟ್ವಿಟರ್ ತಟಸ್ಥ, ವಸ್ತುನಿಷ್ಠ ವೇದಿಕೆಯಲ್ಲ, ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತದೆ' ಎಂದು ಹೇಳಿದ್ದಾರೆ.

'ನನ್ನ ಟ್ವಿಟರ್ ಖಾತೆ ಸ್ಥಗಿತಗೊಳಿಸುವ ಮೂಲಕ ನಮ್ಮ ರಾಜಕೀಯ ಪ್ರಕ್ರಿಯೆಯಲ್ಲಿ ಕಂಪನಿ ಹಸ್ತಕ್ಷೇಪ ಮಾಡುತ್ತಿದೆ. ನಮ್ಮ ರಾಜಕೀಯವನ್ನು ವ್ಯಾಖ್ಯಾನಿಸಲು ಕಂಪನಿ ಪ್ರಯತ್ನಿಸುತ್ತಿದೆ. ಒಂದು ರಾಜಕಾರಣಿಯಾಗಿ ನನಗಿದು ಇಷ್ಟವಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ.

'ಇದು ರಾಹುಲ್ ಗಾಂಧಿ ಮೇಲಿನ ದಾಳಿಯಲ್ಲ. ನಾನು 20 ಲಕ್ಷ ಹಿಂಬಾಲಕರನ್ನು ಹೊಂದಿದ್ದೇನೆ. ಅವರಿಗೂ ಅಭಿಪ್ರಾಯದ ಹಕ್ಕನ್ನು ನಿರಾಕರಿಸಲಾಗಿದೆ. ತಟಸ್ಥ ವೇದಿಕೆಯ ಪರಿಕಲ್ಪನೆಯನ್ನು ಟ್ವಿಟರ್ ಉಲ್ಲಂಘಿಸಿದೆ' ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.