ADVERTISEMENT

ಮಧ್ಯಪ್ರದೇಶ: ಕಮಾಂಡರ್ ಸೇರಿ ಇಬ್ಬರ ಸಾವು

ಸೇನಾ ತಾಲೀಮು ವೇಳೆ ಅವಘಡ

ಪಿಟಿಐ
Published 7 ಅಕ್ಟೋಬರ್ 2022, 13:51 IST
Last Updated 7 ಅಕ್ಟೋಬರ್ 2022, 13:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ(ಪಿಟಿಐ): ಮಧ್ಯಪ್ರದೇಶದ ಬಬಿನಾದಲ್ಲಿ ಗುಂಡು ಹಾರಿಸುವ ತಾಲೀಮು ನಡೆಸುತ್ತಿದ್ದ ವೇಳೆ ಭಾರತೀಯ ಸೇನೆಯ ಇಬ್ಬರು ಯೋಧರು ಮೃತಪಟ್ಟು, ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಅ.6ರಂದು ನಡೆದ ತಾಲೀಮು ವೇಳೆ ಟಿ–90 ಟ್ಯಾಂಕ್‌ ಸ್ಫೋಟಗೊಂಡು ಮೂವರು ಗಾಯಗೊಂಡಿದ್ದರು. ಕೂಡಲೇ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರದೃಷ್ಟವಶಾತ್‌ ಕಮಾಂಡರ್‌ ಮತ್ತು ಗನ್ನರ್‌ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಗಾಯಗೊಂಡ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸೇನೆಯು ಪ್ರಕರಣದ ತನಿಖೆಗೆ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT