ADVERTISEMENT

ಉಗ್ರರ ದಾಳಿ: ಮೂವರು ಯೋಧರು ಹುತಾತ್ಮ

​ಪ್ರಜಾವಾಣಿ ವಾರ್ತೆ
Published 25 ಮೇ 2019, 14:23 IST
Last Updated 25 ಮೇ 2019, 14:23 IST
Two army jawan
Two army jawan   

ಗುವಾಹಟಿ:ಉತ್ತರ ನಾಗಾಲ್ಯಾಂಡ್‌ನಲ್ಲಿ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಅಸ್ಸಾಂ ರೈಫಲ್ಸ್‌ ಸಿಬ್ಬಂದಿ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಅರುಣಾಚಲ ಪ್ರದೇಶ ಮತ್ತು ಮ್ಯಾನ್ಮಾರ್ ಪ್ರದೇಶದ ಟೋಬು ಮತ್ತು ಉಖಾ ಜಿಲ್ಲೆಗಳ ನಡುವೆಈ ದಾಳಿ ನಡೆದಿದೆ.

ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಯೋಧರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಮೂವರ ಸ್ಥಿತಿ ಚಿಂತಾಜನಕವಾಗಿದೆ.

ADVERTISEMENT

ನ್ಯಾಷನಲ್ ಪೀಪಲ್ಸ್‌ ಪಾರ್ಟಿ (ಎನ್‌ಪಿಪಿ) ಶಾಸಕ ತಿರೊಂಗ ಅಬೊ ಸೇರಿದಂತೆ ಹತ್ತು ಮಂದಿಯನ್ನು ಉಗ್ರರು ಹತ್ಯೆಗೈದ ಹಿನ್ನೆಲೆಯಲ್ಲಿ, ಉಗ್ರರನ್ನು ಸೆರೆ ಹಿಡಿಯಲು ಭದ್ರತಾ ಪಡೆ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದೆ.

ಉಗ್ರರ ಶೋಧಕ್ಕಾಗಿ ಯೋಧರು ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.

ಎರಡು ದಿನಗಳ ಹಿಂದೆ ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌, ಅಸ್ಸಾಂ ಮತ್ತು ಅರುಣಾಚಲ ಪ್ರದೇಶಕ್ಕೆಭೇಟಿ ನೀಡಿ, ಕಾರ್ಯಾಚರಣೆಗೆ ಸೂಚನೆ ನೀಡಿದ್ದರು. ಸೇನಾ ಮುಖ್ಯಸ್ಥರ ಭೇಟಿಯ ಬೆನ್ನಲ್ಲೇ ಈ ದಾಳಿ ನಡೆದಿದೆ.

ದಾಳಿಯ ಹೊಣೆಯನ್ನು ಯಾವ ಉಗ್ರ ಸಂಘಟನೆಯೂ ಹೊತ್ತಿಲ್ಲ. ದಾಳಿಗೆ ಎನ್‌ಎಸ್‌ಸಿಎನ್‌(ಐಎಂ) ಸಂಘಟನೆಯೇ ಕಾರಣವೆಂದು ಶಂಕಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.