ಗುವಾಹಟಿ: ಇಬ್ಬರು ಬಾಂಗ್ಲಾ ನುಸುಳುಕೋರರನ್ನು ಬಂಧಿಸಿರುವ ಅಸ್ಸಾಂ ಪೊಲೀಸರು ಅವರನ್ನು ಸ್ವದೇಶಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಒಳನುಸುಳುವಿಕೆಯ ಮೇಲೆ ತೀವ್ರ ನಿಗಾ ಇಡಲಾಗಿದೆ. ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಇಬ್ಬರು ಬಾಂಗ್ಲಾ ಪ್ರಜೆಗಳನ್ನು ಬಂಧಿಸಿ ವಾಪಸ್ ಕಳುಹಿಸಲಾಗಿದೆ ಎಂದು ಶರ್ಮಾ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇಬ್ಬರು ನುಸುಳುಕೋರರನ್ನು ಸಬಿಹಾ ಚೌಧರಿ ಮತ್ತು ಜುವೆಲ್ ಹುಸೇನ್ ಎಂದು ಗುರುತಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.